ಅನ್ನ ಭಾಗ್ಯ ಯೋಜನೆಗೆ ಇಂದು ಚಾಲನೆ

Update: 2023-07-10 06:12 GMT

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಲಿದೆ.

ಯೋಜನೆಯ ರೂಪುರೇಷೆಯಂತೆ ಸರ್ಕಾರ ಪ್ರತಿ ವ್ಯಕ್ತಿಗೆ 10 ಕಿಲೋ ಅಕ್ಕಿ ನೀಡಬೇಕಿತ್ತು. ಜುಲೈ 1 ರಂದು ಯೋಜನೆಯನ್ನು ಪ್ರಾರಂಭಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ರಾಜ್ಯಗಳಿಗೆ ಅಕ್ಕಿ ಮತ್ತು ಗೋಧಿ ಮಾರಾಟವನ್ನು ಸ್ಥಗಿತಗೊಳಿಸುವ ನೀತಿ ನಿರ್ಧಾರವನ್ನು ತೆಗೆದುಕೊಂಡಿದ್ದರಿಂದ ಅಡಚಣೆಯುಂಟಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅಕ್ಕಿ ಸರಬರಾಜು ಖಾತ್ರಿಯಾಗುವವರೆಗೆ ಫಲಾನುಭವಿಗಳಿಗೆ ಅಕ್ಕಿ ಬದಲಿಗೆ ತಲಾ 1 ಕೆಜಿಗೆ 34 ರೂಪಾಯಿಯಂತೆ 5 ಕಿಲೋ ಅಕ್ಕಿಗೆ 170 ರೂ. ನಗದು ಪಾವತಿಸಲು ನಿರ್ಧರಿಸಿದೆ.

ಈ ಯೋಜನೆ ಸಹಿತ 2023-24ನೇ ಹಣಕಾಸು ವರ್ಷದ ಎಲ್ಲಾ ಐದು ಭರವಸೆಗಳಿಗೆ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಹಣ ಮೀಸಲಿಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News