ಆರು ತಿಂಗಳೊಳಗೆ 1,500 ಇನ್ಸ್‌ಪೆಕ್ಟರ್‌ಗಳ ನೇಮಕ: ಗೃಹ ಸಚಿವ ಜಿ.ಪರಮೇಶ್ವರ್

Update: 2023-11-24 20:58 IST
ಆರು ತಿಂಗಳೊಳಗೆ 1,500 ಇನ್ಸ್‌ಪೆಕ್ಟರ್‌ಗಳ ನೇಮಕ: ಗೃಹ ಸಚಿವ ಜಿ.ಪರಮೇಶ್ವರ್
  • whatsapp icon

ಬೆಂಗಳೂರು: ಮುಂದಿನ 6 ತಿಂಗಳ ಒಳಗಾಗಿ 1,500 ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳನ್ನು ನೇಮಕ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಾದಕ್ಕೆ ಗುರಿಯಾಗಿದ್ದ ಪಿಎಸ್‌ಐ ಮರು ಪರೀಕ್ಷೆ ಪೂರ್ಣಗೊಂಡ ಬಳಿಕ ಕೂಡಲೇ 400 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತೇವೆ. ಇದಾದ ಬಳಿಕ ಇನ್ನೂ 600 ಹುದ್ದೆಗಳ ನೇಮಕಕ್ಕೆ ಅನುಮೋದನೆ ಸಿಕ್ಕಿದೆ. ಈ ಬಗ್ಗೆ ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ. ಹೀಗೆ, ಮುಂದಿನ 6 ತಿಂಗಳ ಒಳಗಾಗಿ 1,500 ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳನ್ನು ನೇಮಕ ಮಾಡುತ್ತೇವೆ ಎಂದರು.

ಉದ್ಯೋಗ ಆಕಾಂಕ್ಷಿಗಳು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಿ. ಆತಂಕ ಪಡದೆ ಉತ್ತಮವಾಗಿ ಪರೀಕ್ಷೆ ಬರೆಯಿರಿ. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವುದು ನಮ್ಮ ಜವಾಬ್ದಾರಿ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪಿಎಸ್‌ಐ ಮರುಪರೀಕ್ಷೆಗೆ ಸಂಬಂಧಿಸಿದಂತೆ ನಾನೇ ಖುದ್ದಾಗಿ ಪೊಲೀಸ್ ಮಹಾನಿರ್ದೇಶಕರು, ಕೆಇಎ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡೇ ಪರೀಕ್ಷೆ ನಡೆಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News