‘ಸ್ವಾತಂತ್ರ್ಯೋತ್ಸವ ಧ್ವಜಾರೋಹಣ’ಕ್ಕೆ ಸಚಿವರ ನೇಮಕ

Update: 2023-07-29 13:47 GMT

ಸಾಂದರ್ಭಿಕ ಚಿತ್ರ 

ಬೆಂಗಳೂರು, ಜು. 29: ಸ್ವಾತಂತ್ರ್ಯ ದಿನಾಚರಣೆ ಆ.15ರಂದು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿಇತರೆ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸೂಚಿಸಲಾಗಿದ್ದು, ಅನಾರೋಗ್ಯ ಅಥವಾ ಇತರ ಕಾರಣಗಳಿಂದಾಗಿ ಸಚಿವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಅನುಪಸ್ಮಿತರಿದ್ದಲ್ಲಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಲು ಆದೇಶದಲ್ಲಿ ತಿಳಿಸಲಾಗಿದೆ.

ಯಾರು ಎಲ್ಲಿ?: ಗೃಹ ಸಚಿವ ಡಾ.ಜಿ.ಪರಮೇಶ್ವರ್-ತುಮಕೂರು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್-ಗದಗ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ- ಬೆಂಗಳೂರು ಗ್ರಾಮಾಂತರ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ-ರಾಮನಗರ, ಇಂಧನ ಸಚಿವ ಕೆ.ಜೆ.ಜಾರ್ಜ್-ಚಿಕ್ಕಮಗಳೂರು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್-ವಿಜಯಪುರ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್-ದಕ್ಷಿಣ ಕನ್ನಡ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ- ಮೈಸೂರು, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ-ಬೆಳಗಾವಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ-ಕಲಬುರ್ಗಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಪಾಟೀಲ್- ಹಾವೇರಿ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್-ವಿಜಯನಗರ, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ-ಯಾದಗಿರಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ- ಬೀದರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ-ಮಂಡ್ಯ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ- ದಾವಣಗೆರೆ, ಕಾರ್ಮಿಕ ಸಚಿವ ಸಂತೋμï ಎಸ್.ಲಾಡ್-ಧಾರವಾಡ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್-ರಾಯಚೂರು, ಅಬಕಾರಿ ಸಚಿವ ತಿಮ್ಮಾಪುರ ರಾಮಪ್ಪ ಬಾಳಪ್ಪ-ಬಾಗಲಕೋಟೆ.

ಪಶು ಸಂಗೋಪನೆ ಮತ್ತು ರೇμÉ್ಮ ಸಚಿವ ಕೆ.ವೆಂಕಟೇಶ್-ಚಾಮರಾಜನಗರ, ಹಿಂದುಳಿದ ವರ್ಗಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ-ಕೊಪ್ಪಳ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್-ಚಿತ್ರದುರ್ಗ, ಯುವಜನ ಸೇವೆಗಳು, ಕ್ರೀಡೆಗಳು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ- ಬಳ್ಳಾರಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ- ಹಾಸನ.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್-ಕೋಲಾರ, ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್- ಉಡುಪಿ, ಮೀನುಗಾರಿಗೆ, ಬಂದರು, ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ-ಉತ್ತರ ಕನ್ನಡ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ- ಶಿವಮೊಗ್ಗ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್-ಚಿಕ್ಕಬಳ್ಳಾಪುರ, ಸಣ್ಣ, ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು-ಕೊಡಗು ಜಿಲ್ಲೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News