ನಿಗಮ, ಮಂಡಳಿಗಳಿಗೆ ನೇಮಕ: ಮಹತ್ವದ ಸಲಹೆ ನೀಡಿದ ಸಚಿವ ಕೆ.ಎಚ್.ಮುನಿಯಪ್ಪ

Update: 2023-08-15 05:44 GMT

ಬೆಂಗಳೂರು: ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಸರಕಾರದ ವಿವಿಧ ನಿಗಮ ಮತ್ತು ಮಂಡಳಿಗಳ ಅಧಿಕಾರ ಗಿಟ್ಟಿಸಿಕೊಳ್ಳಲು ತೆರೆಮರೆಯ ಪ್ರಯತ್ನ ಆರಂಭಿಸಿದ್ದಾರೆ. ಈ ನಡುವೆ ಪಕ್ಷದ ಹಿರಿಯ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅವರು ನಿಗಮ ಮತ್ತು ಮಂಡಳಿಗಳ ನೇಮಕಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ. 

ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಕೆ.ಎಚ್.ಮುನಿಯಪ್ಪ, ʼʼಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ನಿಗಮ, ಮಂಡಳಿಗಳಿಗೆ ನೇಮಕ ಮಾಡಿ ಅವಕಾಶ ಕಲ್ಪಿಸಬೇಕು. ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೂ ಪ್ರಮುಖ ಹುದ್ದೆ ನೀಡಬೇಕುʼʼ ಎಂದು ಸಲಹೆ ನೀಡಿದ್ದಾರೆ. 

 

ರಾಜ್ಯದಲ್ಲಿ 85 ನಿಗಮ ಮಂಡಳಿಗಳಿವೆ. ಯಾವುದೇ ಹೊಸ ಸರಕಾರ ರಚನೆ ಆದ ಬಳಿಕ ಪಕ್ಷ ಸಂಘಟನೆಗಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು, ಪಾಲಿಕೆ, ನಗರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರನ್ನಾಗಿ ನೇಮಕ ಮಾಡುವ ಮೂಲಕ ರಾಜಕೀಯ ಸ್ಥಾನಮಾನಗಳನ್ನು ಕಲ್ಪಿಸಲಾಗುತ್ತದೆ. 

ʼʼಹಿರಿಯರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕುʼʼ

ʼಸಿಎಂ, ಡಿಸಿಎಂ ಆಯ್ಕೆ ಮಾಡುವುದು ಹೈಕಮಾಂಡ್ ನಿರ್ಧಾರ. ಆದರೆ ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕು. ಉಳಿದವರಿಗೆ ಅವಕಾಶ ಮಾಡಿಕೊಡಬೇಕು' ಎಂದು ಮುನಿಯಪ್ಪ ಸಲೆಹೆ ನೀಡಿದ್ದಾರೆ. 

ಬಳಿಕ ಅದೇ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು, ʼʼಪಕ್ಷದ ಗೆಲುವಿಗಾಗಿ ದುಡಿದ ಹೆಚ್ಚು ಜನರಿದ್ದಾರೆ. ಅವರಿಗೆ ಅಧಿಕಾರ ನೀಡುವ ಉದ್ದೇಶದಿಂದ ತಲಾ ಎರಡೂವರೆ ವರ್ಷಗಳ ಅವಧಿಗೆ ಅಧಿಕಾರ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ನೇಮಕಕ್ಕೆ ಅರ್ಹರಾಗಿರುವವರ ಪಟ್ಟಿ ಒದಗಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಪತ್ರ ಬರೆಯಲಾಗಿದೆʼʼ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News