‘ಫೇಕ್ ನ್ಯೂಸ್’ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ: ಸಚಿವ ದಿನೇಶ್ ಗುಂಡೂರಾವ್

Update: 2024-02-19 15:51 GMT

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಮೂಲಕ ಫೇಕ್ ನ್ಯೂಸ್ ಗಳನ್ನು ಹರಡುವವರ ವಿರುದ್ಧ ರಾಜ್ಯ ಸರಕಾರ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಗೃಹ ಸಚಿವರ ಪರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಹರೀಶ್ ಪೂಂಜ ಗಮನ ಸೆಳೆದ ಸೂಚನೆಗೆ ಉತ್ತರಿಸಿದ ಅವರು, ತಂತ್ರಜ್ಞಾನ ಬಳಕೆ, ಕೃತಕ ಬುದ್ಧಿಮತ್ತೆಯಿಂದಾಗಿ ಧ್ವನಿಗಳ ನಕಲು, ಮುಖ ಚಹರೆಯ ನಕಲು ಮಾಡಿ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದನ್ನು ಇತ್ತೀಚಿನ ದಿನಗಳಲ್ಲಿ ನಾವು ನೋಡುತ್ತಿದ್ದೇವೆ. ಈಗಾಗಲೆ, ನಮ್ಮ ಸರಕಾರ ಸೋಷಿಯಲ್ ಮೀಡಿಯಾ ಮಾನಿಟರ್ ಸೆಲ್ ಅನ್ನು ಮಾಡಿದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ನಕಲಿ ಸುದ್ದಿಗಳಿಂದ ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಆಗುವ ಸಾಧ್ಯತೆಗಳಿವೆ. ಹಾಗಾಗಿ ಇದನ್ನು ನಮ್ಮ ಸರಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾವ ಮಾಡಿದ ಹರೀಶ್ ಪೂಂಜ ತನ್ನ ಪತ್ನಿಯ ಭಾವಚಿತ್ರವನ್ನು ಬಳಸಿಕೊಂಡು ನಕಲಿ ಖಾತೆಯ ಮೂಲಕ ತೇಜೋವಧೆ ಮಾಡುವಂತಹ ಸುಳ್ಳು ಸುದ್ದಿಗಳನ್ನು ಹರಡಿಸುತ್ತಿರುವ ಕುರಿತು ಗಮನ ಸೆಳೆದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News