ಅನಂತಕುಮಾರ್ ಹೆಗಡೆ ಬಂಧನ ಸ್ಥಳೀಯ ಪೊಲೀಸರಿಗೆ ಬಿಟ್ಟಿದ್ದು: ಗೃಹ ಸಚಿವ ಜಿ.ಪರಮೇಶ್ವರ್

Update: 2024-01-16 12:08 GMT

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮೊಕದ್ದಮೆ ದಾಖಲಾಗಿದ್ದು, ಸಾಕ್ಷ್ಯ ಸಂಗ್ರಹಿಸಿ ಬಂಧಿಸಬೇಕೋ, ಬೇಡವೋ ಎಂಬುದನ್ನು ಸ್ಥಳೀಯ ಪೊಲೀಸರು ನಿರ್ಧರಿಸಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ದಾಖಲಾಗಿರುವ ಪ್ರಕರಣದ ಆಧಾರದ ಮೇಲೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಬಂಧಿಸಬೇಕೋ, ಬೇಡವೋ ಎಂಬುದನ್ನು ಸ್ಥಳೀಯವಾಗಿ ನಿರ್ಧರಿಸುತ್ತಾರೆ. ನಾವು ಸ್ಥಳೀಯ ಪೊಲೀಸರಿಗೆ ಯಾವುದೇ ರೀತಿಯ ನಿರ್ದೇಶನಗಳನ್ನು ನೀಡುವುದಿಲ್ಲ ಎಂದು ಹೇಳಿದರು.

ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯಬೇಕು ಎಂದು ಈವರೆಗೂ ಯಾರೂ ಕೇಳಿಲ್ಲ. ಒಂದು ವೇಳೆ ಈ ನಿಟ್ಟಿನಲ್ಲಿ ಬೇಡಿಕೆಗಳು ಬಂದರೆ ಸರಕಾರ ಸೂಕ್ತ ಉತ್ತರ ನೀಡಲಿದೆ. ಇನ್ನೂ, ಗೃಹಸಚಿವನಾಗಿ ನಾನು ಕಾನೂನುಬಾಹಿರವಾಗಿದ್ದರೂ ಪರವಾಗಿಲ್ಲ ಬಿಟ್ಟುಬಿಡಿ ಎಂದು ಹೇಳಲು ಬರುವುದಿಲ್ಲ. ಕಾನೂನು ಎಲ್ಲರಿಗೂ ಒಂದೇ. ಕಾನೂನಾತ್ಮಕವಾಗಿ ತೆಗೆದುಕೊಂಡ ಕ್ರಮಗಳನ್ನು ಸರಕಾರ ಒಪ್ಪಿಕೊಳ್ಳಲಿದೆ ಎಂದು ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News