ಜಿಂಕೆ ಕೊಂಬುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Update: 2023-08-23 16:25 GMT

ಹನೂರು: ಜಿಂಕೆ ಕೊಂಬುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಇಲ್ಲಿನ  ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.

ಹನೂರು ತಾಲೂಕಿನ ಹುಣಸೆಪಾಳ್ಯ ಗ್ರಾಮದ ನಿವಾಸಿಗಳಾದ ಈರಣ್ಣ (49) ಆರ್ಯ (22) ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆಯ ವಿವರ: ಹುಣಸೆಪಾಳ್ಯ ಗ್ರಾಮದ ಇಬ್ಬರು ವ್ಯಕ್ತಿಗಳು ಒಡೆಯರಪಾಳ್ಯ ಕಡೆಯಿಂದ ಕೊಳ್ಳೇಗಾಲ ಮಾರ್ಗವಾಗಿ ಬೈಕ್ ನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಜಿಂಕೆ ಕೊಂಬುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರದಳದ ಸಬ್ ಇನ್ಸ್ಪೆಕ್ಟರ್ ವಿಜಯ್ ರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ದ್ವಿಚಕ್ರ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 12 ಒಣಗಿದ ಜಿಂಕೆ ಕೊಂಬು, ಕೃತಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನ ಕೆಎ-10 ಯು 4034 ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಕೊಳ್ಳೆಗಾಲ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

ದಾಳಿಯಲ್ಲಿ ಮುಖ್ಯಪೇದೆಗಳಾದ ಸ್ವಾಮಿ, ರಾಮಚಂದ್ರ, ಶಂಕರ್, ಬಸವರಾಜು ಪೇದೆ ಬಸವರಾಜು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News