ರಾಜ್ಯದಲ್ಲಿರುವ ಎಟಿಎಂ ಸರ್ಕಾರಕ್ಕೆ ನಿಗಮ ಮಂಡಳಿಗಳೇ ಎಟಿಎಂಗಳು : ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ

Update: 2024-06-02 08:22 GMT

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಸಂಬಂಧ "ರಾಜ್ಯದಲ್ಲಿರುವ ಎಟಿಎಂ ಸರ್ಕಾರಕ್ಕೆ ನಿಗಮ ಮಂಡಳಿಗಳೇ ಎಟಿಎಂಗಳು" ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, "ಕರ್ನಾಟಕವನ್ನು ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ಎಟಿಎಂಗಳು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ಗಮನಿಸಿದರೆ, ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ದಟ್ಟವಾದ ಶಂಕೆ ಮೂಡುತ್ತಿದೆ" ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

"ದಲಿತರು, ಹಿಂದುಳಿದವರು, ಬಡವರು, ರೈತರು, ಗ್ರಾಮೀಣ ಪ್ರದೇಶಗಳ ಜನರ ಕಲ್ಯಾಣಕ್ಕೆ ವಿನಿಯೋಗವವಾಗಬೇಕಿದ್ದ ನಿಗಮ ಮಂಡಳಿಗಳ ಹಣ ಭ್ರಷ್ಟರ ಪಾಲಾಗುತ್ತಿರುವ ವಾಸನೆ ಬರುತ್ತಿದೆ. ಕರ್ನಾಟಕದ ಜನತೆಯಲ್ಲಿ ಮೂಡಿರುವ ಈ ಅನುಮಾನ ನಿವಾರಿಸಲು, ರಾಜ್ಯದ ಎಲ್ಲಾ ನಿಗಮ ಮಂಡಳಿಗಳ ಹಣಕಾಸಿನ ಸ್ಥಿತಿಗತಿ ಬಗ್ಗೆ ಒಂದು ಸಂಪೂರ್ಣ ಆಡಿಟ್ ನಡೆಸಿ, ನಿಗಮ ಮಂಡಳಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು" ಎಂದುಆರ್.ಅಶೋಕ್ ಸಿಎಂ‌ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News