ವಿಧಾನಸಭೆ ಅಧಿವೇಶ : ಊಟದ ಬಳಿಕ ಶಾಸಕರಿಗೆ ಕಿರು ನಿದ್ರೆಗಾಗಿ ವಿಶೇಷ ಆಸನ ವ್ಯವಸ್ಥೆ!

Update: 2024-07-19 16:51 GMT

ಬೆಂಗಳೂರು : ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಮಧ್ಯಾಹ್ನ ಊಟದ ಬಳಿಕ ಶಾಸಕರಿಗೆ ಕಿರು ನಿದ್ರೆಗಾಗಿ ವಿಶೇಷ ಆಸನ ವ್ಯವಸ್ಥೆ ಮಾಡಲು ವಿಧಾಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನಿರ್ಧರಿಸಿದ್ದಾರೆ.

ಶುಕ್ರವಾರ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪಿಸಿದ ಅವರು, ಈ ಕುರ್ಚಿ ಪ್ರಾಯೋಗಿಕವಾಗಿ ಮಾಡಿದ್ದು, ಒಂದು ಕುರ್ಚಿಯನ್ನು ಇರಿಸಲಾಗಿದೆ. ಮುಂದಿನ ಅಧಿವೇಶನದ ಹೊತ್ತಿಗೆ ಈ ಕುರ್ಚಿಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಪ್ರಕಟಿಸಿದರು.

ಖುಷಿಯ ವಿಚಾರ ಏನೆಂದರೆ ಶಾಸಕರಿಗೆ ಸದನಕ್ಕೆ ಬೇಗ ಬರಲು ಬೆಳಗ್ಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ ಊಟಕ್ಕೆ ದೂರ ಹೋಗಿ ಬರಲು ತೊಂದರೆಯಾಗಲಿದೆ ಎಂಬ ಕಾರಣಕ್ಕೆ ಇಲ್ಲಿಯೇ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ.

ಊಟ ಎಲ್ಲಾ ಚೆನ್ನಾಗಿತ್ತು. ಶಾಸಕರ ಭವನಕ್ಕೆ ಹೋಗಿ ನಿದ್ದೆ ಮಾಡಿ ಬರುತ್ತೇನೆ ಎಂದು ಹೋದ ಶಾಸಕರು ಅಲ್ಲಿಯೇ ಮಲಗಿ ಬಿಡುತ್ತಾರೆ. ಕಲಾಪಕ್ಕೆ ಬರುವುದೇ ಇಲ್ಲ. ಅದಕ್ಕಾಗಿ ಇಲ್ಲೇ ಪಕ್ಕದಲ್ಲಿ ಕುರ್ಚಿಯ ವ್ಯವಸ್ಥೆ ಮಾಡಲಾಗಿದೆ. ನಿದ್ದೆ ಬಂದರೆ ಅದರಲ್ಲಿ ಕುಳಿತು ವಿಶ್ರಾಂತಿ ಪಡೆಯಿರಿ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News