ಸಿಎಂ ಭೇಟಿ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘ: ಬಾಕಿ ಬಿಲ್‍ ಬಿಡುಗಡೆಗೆ ಮನವಿ

Update: 2023-08-08 07:42 GMT

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಬಾಕಿ ಬಿಲ್‍ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ. 

ʼಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇದೆ. ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವದಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂಬ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆʼ ಎಂದು ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ತಿಳಿಸಿದ್ದಾರೆ.

ಸರಕಾರದಿಂದ ಬಿಡುಗಡೆ ಆಗಿರುವ ಅನುದಾನ ಪಾಲಿಕೆಯ ಖಜಾನೆಯಲ್ಲಿ ಇದ್ದರೂ ಗುತ್ತಿಗೆದಾರರಿಗೆ ಬಾಕಿ ಬಿಡುಗಡೆ ಆಗುತ್ತಿಲ್ಲ ಎಂಬುದನ್ನು ಗಮನಕ್ಕೆ ತಂದಾಗ,   ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಬಿಲ್ ಪಾವತಿ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮತ್ತು ಮುಖ್ಯ ಆಯುಕ್ತರೊಂದಿಗೆ ಚರ್ಚಿಸಿ ಆದಷ್ಟೂ ತ್ವರಿತವಾಗಿ ಬಾಕಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು  ಅವರು ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಜಿ.ಎಂ. ರವೀಂದ್ರ, ನಂದಕುಮಾರ್ ಜಿ.ಎಂ. ಡಿ.ಎಂ.ನಾಗರಾಜ್, ಹನುಮಂತಯ್ಯ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News