ಕಲಬುರಗಿಯಲ್ಲಿ ಪ್ರತ್ಯೇಕ‌ ರಾಜ್ಯದ ಧ್ವಜಾರೋಹಣಕ್ಕೆ ಯತ್ನ: 20ಕ್ಕೂ ಹೆಚ್ಚು ಮಂದಿಯ ಬಂಧನ

Update: 2023-11-01 06:02 GMT

ಕಲಬುರಗಿ, ನ.1: ಇಂದು ಕನ್ನಡ ರಾಜ್ಯೋತ್ಸವ ನಿಮಿತ್ತ ರಾಜ್ಯಾದ್ಯಂತ ರಾಜ್ಯೋತ್ಸವದ ಸಂಭ್ರಮದಲ್ಲಿರುವಾಗ ಇತ್ತ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕೆಲವರು ಪ್ರತ್ಯೇಕ ರಾಜ್ಯ ರಚನೆಯ ಧ್ವಜವನ್ನು ಪ್ರದರ್ಶಿಸಿದ್ದಲ್ಲದೆ, ʼಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ’ಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. 

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಸದಸ್ಯರು ನಗರದ ಕೋರ್ಟ್ ವೃತ್ತದ ಬಳಿ ಜಮಾಯಿಸಿ ಪ್ರತ್ಯೇಕ ರಾಜ್ಯದ ಬಾವುಟದೊಂದಿಗೆ  ಮೆರವಣಿಗೆ ಮೂಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಬಳಿ ತೆರಳಿ ಅಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣ ಮಾಡಲು ಸಿದ್ಧತೆ ನಡೆಸಿದ್ದರು. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಯುನೈಟೆಡ್ ಆಸ್ಪತ್ರೆಯ ಬಳಿ ತಡೆದು ನಿಲ್ಲಿಸಿ, ಮಾರ್ಗ ಮಧ್ಯದಲ್ಲೇ 20 ಕ್ಕೂ ಹೆಚ್ಚು ಜನರನ್ನು ಬಂಧಿಸಿ ಪೊಲೀಸ್ ವಾಹನದಲ್ಲಿ‌ ಕರೆದುಕೊಂಡು ಹೋಗಿದ್ದಾರೆ. 

ಸಮಿತಿ ಅಧ್ಯಕ್ಷ ಎಂ.ಎಸ್ .ಪಾಟೀಲ್, ಮುಖಂಡರಾದ ಉದಯಕುಮಾರ ಜೇವರ್ಗಿ, ವಿನೋದಕುಮಾರ ಜೇನೆವರಿ , ಲಕ್ಷ್ಮೀ ಕಾಂತ ಸ್ಚಾದಿ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. 

ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿತ್ತು.

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News