ಬೆಳಗಾವಿ | ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ, ವೀಡಿಯೊ ವೈರಲ್: 12 ಗಂಟೆಯೊಳಗೆ ಆರೋಪಿ ಸೆರೆ

Update: 2023-07-12 10:57 GMT

ಬೆಳಗಾವಿ, ಜು.12: ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಾದ 12 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯ  ಮಾರುತಿ ನಗರದ ಗಜಾನನ ಪಾಟೀಲ್ (40) ಬಂಧಿತ ಆರೊಪಿ ಎಂದು ಪೊಲೀಸರು ಗುರುತಿಸಿದ್ದಾರೆ. 

ಆರೋಪಿಯು ಟ್ಯೂಷನ್‌ಗೆ ಹೋಗುತ್ತಿದ್ದ 9 ನೇ ತರಗತಿ ವಿದ್ಯಾರ್ಥಿನಿಯನ್ನು ಎತ್ತಿಕೊಂಡು ಹೋಗಿ ಅಪಹರಿಸಲು ಯತ್ನಿಸಿದ್ದ, ಈ ವೇಳೆ ಬಾಲಕಿ ಕಿರುಚಿದ್ದರಿಂದ ಆರೋಪಿ ಓಡಿ ಹೋಗಿದ್ದಾನೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಈ ಘಟನೆಯ ಬಗ್ಗೆ ಆತಂಕಿತರಾದ ಹೆತ್ತವರು ಟಿಳಕವಾಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಸದ್ಯ ಆತನನ್ನು ಪೊಲೀಸರು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News