ಸಂಸದ ಪ್ರತಾಪ್ ಸಿಂಹ ಕಾರಿಗೆ ಮುತ್ತಿಗೆ ಹಾಕಲು ಯತ್ನ; ಯುವ ಕಾಂಗ್ರೆಸ್ ಕಾರ್ಯರ್ತರು ವಶಕ್ಕೆ

Update: 2023-07-05 09:36 GMT

ಮೈಸೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡದಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯರ್ತರು ಸಂಸದ ಪ್ರತಾಪ್ ಸಿಂಹ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನ ನಡೆಸಿದ ಘಟನೆ ನಡೆಯಿತು.

ಬುಧವಾರ ನಗರದ ಜಲದರ್ಶಿನಿಯಲ್ಲಿರುವ ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಬುಧವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾದರು. ಪೊಲೀಸರು ಜಲದರ್ಶಿನಿ ಬಳಿ ಪ್ರತಿಭಟನೆಗೆ ಅವಕಾಶ ನೀಡದ್ದರಿಂದ ಜಲದರ್ಶಿನಿ ಮುಂಭಾಗದ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕಚೇರಿಗೆ ಹೋಗಲು ಸಂಸದ ಪ್ರತಾಪ್ ಸಿಂಹ ತಮ್ಮ ಕಾರಿನಲ್ಲಿ ಆಗಮಿಸಿದರು. ಇದನ್ನು ಗಮನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಓಡಿ ಬಂದು ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ತಕ್ಷಣ ಸಂಸದರ ಕಾರನ್ನು ಗೇಟಿನ ಒಳಗೆ ಕಳುಹಿಸಿ ಬ್ಯಾರಿಕೇಡ್ ಅಡ್ಡ ಹಾಕಿ ಪ್ರತಿಭಟನಾಕಾರರನ್ನು ತಡೆದರು.

ಇದರಿಂದ ಕೆರಳಿದ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡದ ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ, ಸಂಸದ ಪ್ರತಾಪ್ ಸಿಂಹ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಹಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಡೊನಾಲ್ಡ್, ದೇವರಾಜ ಬ್ಲಾಕ್ ಅಧ್ಯಕ್ಷ ವಿಶ್ವನಾಥ್, ಎನ್.ಎಸ್.ಯು.ಐ ನ ರಫೀಕ್, ಚಂದ್ರು ಸೇರಿದಂತೆ ಹಲವರು ಭಾಗವಹಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News