ಲೇಖಕಿ ಡಾ.ಕೆ. ಷರೀಫಾರಿಗೆ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ

Update: 2023-11-30 18:06 GMT

ಬೆಂಗಳೂರು, ನ.29: ಪೋಷಕರು ಮಕ್ಕಳಲ್ಲಿ ಸಾಹಿತ್ಯಾಸಕ್ತಿಯನ್ನು ಬೆಳೆಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕರೆ ನೀಡಿದ್ದಾರೆ.

ಬುಧವಾರ ನಗರದ ಗಾಂಧಿ ಭವನದಲ್ಲಿ ಲೇಖಕಿ ಡಾ.ಕೆ.ಷರೀಫಾ ಅವರಿಗೆ ಮುಸ್ಲಿಮ್ ಲೇಖಕರ ಸಂಘದಿಂದ ಕೊಡಮಾಡುವ 2022ನೇ ಸಾಲಿನ ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮತ್ತು ಕನ್ನಡ, ಉರ್ದು ಕವಿಗೋಷ್ಠಿ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಇಂಟರ್‌ನೆಟ್‌ನ ಇಂದಿನ ಯುಗದಲ್ಲಿ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳುವವರ ಸಂಖ್ಯೆ ಕ್ಷೀಣಿಸುತ್ತಿದೆ. ಆದರೆ, ವಾಸ್ತವವಾಗಿ ಕ್ಷೇತ್ರವು ಜೀವನದಲ್ಲಿ ಬೆಳೆಯಲು ವ್ಯಾಪಕ ಅವಕಾಶ ಒದಗಿಸುತ್ತದೆ. ಸಾಹಿತ್ಯವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಹಾಗಾಗಿ, ಮನೆಯಿಂದಲೇ ಮಕ್ಕಳಿಗೆ ಬಾಲ್ಯದಿಂದಲೇ ಪೋಷಕರು ಉತ್ತೇಜನ ನೀಡಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ಉರ್ದು-ಕನ್ನಡ ಕವಿಗೋಷ್ಠಿಯಲ್ಲಿ ಕವಿ ಶಿವಕುಮಾರ ಮಾವಲಿ, ಮುಹಮ್ಮದ್ ಆಝಮ್ ಶಾಹಿದ್, ಮುನೀರ್ ಅಹ್ಮದ್ ಜಾಮಿ, ಫರ್ಹನಾಝ್ ಮಸ್ಕಿ ಹಾಗೂ ನದೀಮ್ ಫಾರೂಖಿ ತಮ್ಮ ಕವನಗಳನ್ನು ವಾಚಿಸಿದರು.

ಕಾರ್ಯಕ್ರಮದಲ್ಲಿ ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್., ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ.ಮುಹಮ್ಮದ್ ಅಲಿ, ಸಲೀಂ ಬೋಳಂಗಡಿ, ಸಯೀದ್ ಇಸ್ಮಾಯೀಲ್, ಎ.ಕೆ.ಕುಕ್ಕಿಲ ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News