ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ ಆಯನೂರು ಮಂಜುನಾಥ್
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಮುಖಂಡ ಆಯನೂರು ಮಂಜುನಾಥ ಹೇಳಿದ್ದಾರೆ.
ಇಂದು ಬೆಳಗ್ಗೆ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ʼʼಈ ಹಿಂದೆ ನಾನು ಬಿಜೆಪಿ ಬಿಡಬೇಕು ಅಂತಾ ನಿರ್ಧಾರ ಮಾಡಿದ್ದೆ. ಕಾಂಗ್ರೆಸ್ನಲ್ಲಿ ಅವಕಾಶ ಇರಲಿಲ್ಲ, ಎಚ್ಡಿಕೆ ಅವಕಾಶ ಕೊಟ್ಟರು. ಬದಲಾದ ಸನ್ನಿವೇಶದಲ್ಲಿ ಮುಂದಿನ ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆʼʼ ಎಂದು ಘೋಷಿಸಿದರು.
ಇಂದು ನಗರದ ಸದಾಶಿವನಗರ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಆಯನೂರು ಮಂಜುನಾಥ್ ಕೆಲ ಕಾಲ ಮಾತುಕತೆ ನಡೆಸಿದ್ದರು.
ವಿಧಾನಸಭೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಆಯನೂರು ಮಂಜುನಾಥ್ ಅದಕ್ಕಾಗಿ ವಿಧಾನ ಪರಿಷತ್‌ನ ತಮ್ಮ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದರು. ಕೆಪಿಸಿಸಿ ಮಟ್ಟದಲ್ಲಿ ಒಪ್ಪಿಗೆ ಸಿಕ್ಕರೂ ಎಐಸಿಸಿಯಲ್ಲಿಅದಕ್ಕೆ ತಡೆ ಬಿದ್ದಿತ್ತು. ಹೀಗಾಗಿ ಕೊನೆಗೆ ಜೆಡಿಎಸ್ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದರು.