ನಾಳೆ ಕಾಂಗ್ರೆಸ್‌ ಸೇರಲಿರುವ ಆಯನೂರು ಮಂಜುನಾಥ್

Update: 2023-08-23 06:17 GMT

ಶಿವಮೊಗ್ಗ: ʼಕೆಲವು ದಿನಗಳಿಂದ ನನ್ನ ಬಗ್ಗೆ ರಾಜಕೀಯ ಕೇಂದ್ರಿತ ಸುದ್ಧಿಗಳು ಹರಿದಾಡಿವೆ. ಎಲ್ಲರ ನಿರೀಕ್ಷೆಯಂತೆ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದೆನೆʼ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ್ ಹೇಳಿದ್ದಾರೆ. 

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರನ್ನು ಭೇಟಿಯಾಗಿದ್ದೆನೆ. ನಾಳೆ ನಾನು ನನ್ನ ಸ್ನೇಹಿತರ ಜೊತೆ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೆನೆʼʼ ಎಂದು ಪ್ರಕಟಿಸಿದರು. 

ʼʼವಿಧಾನಸಭಾ ಚುನಾವಣೆ ವೇಳೆಯೇ ಕಾಂಗ್ರೆಸ್ ಸೇರಬೇಕಿತ್ತು. ಆಗ ಜೆಡಿಎಸ್ ನಿಂದ ನಾನು ಸ್ಪರ್ಧೆಗಿಳಿಯಬೇಕಾಯ್ತು. ಮುಂಬರುವ ಚುನಾವಣೆಯಲ್ಲಿ ಸಮಯ, ಶಕ್ತಿ ನೀಡಿ ದುಡಿಯುವ ನಿಲುವನ್ನು ಹೊಂದಿದ್ದೆನೆ. ಮುಂಬರುವ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆʼʼ ಎಂದು ತಿಳಿಸಿದರು. 

ʼʼಇದು ನನ್ನ ಕೊನೆಯ ಬಸ್ ಸ್ಟಾಪ್ ಆಗಿದೆʼʼ

ʼʼಆಗ ಅನಿವಾರ್ಯವಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದೆ. ಇದು ನನ್ನ ಕೊನೆಯ ಬಸ್ ಸ್ಟಾಪ್ ಆಗಿದೆ. ಆತಂಕಕ್ಕೆ ಒಳಗಾಗಿರುವ ಕೆಲ ನಾಲ್ಕು ಜನರು ನನಗೆ ವಿರೋಧಿಸುತ್ತಿದ್ದಾರೆ. ಕೆಲವರ ವಿರೋಧ ಇದ್ದರೂ ಶೇ. 99 ರಷ್ಟು ಜನರು ನನ್ನನ್ನು ಒಪ್ಪಿದ್ದಾರೆ. ನನಗೆ ವಿರೋಧಿಸುವವರಿಗೆ ನಾನು ಯಾವುದೇ ಅಡ್ಡಿಯಾಗಲ್ಲ. ನಿರಾಶೆಯಾದವರು ಯಾಕೋ ಆತಂಕಕ್ಕೊಳಗಾಗಿದ್ದಾರೆ. ನಾನು ಮತ್ತಷ್ಟು ಬಲ ತುಂಬಲು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಿದ್ದೆನೆ. ವಿರೋಧ ಮಾಡುವವರಿಗೆ ನಾನು ಅಡ್ಡಿಯಾಗಲ್ಲʼʼ ಎಂದು  ಆಯನೂರು ಮಂಜುನಾಥ್ ಸ್ಪಷ್ಟಪಡಿಸಿದರು. 

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News