ಮುಖ್ಯಮಂತ್ರಿ ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ : ಬಿ.ವೈ.ವಿಜಯೇಂದ್ರ

Update: 2024-07-19 13:14 GMT

ಬೆಂಗಳೂರು : ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಸ್ಥಿತಿ ಇಂದು ರಾಜ್ಯದಲ್ಲಿ ಉದ್ಭವವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣಕಾಸು ಇಲಾಖೆ ಸಚಿವರೂ ಆದ ಸಿಎಂ ಸಮ್ಮತಿ ಇಲ್ಲದೇ, ಹಣ ವರ್ಗಾವಣೆ ಆಗಲು ಸಾಧ್ಯವೇ ಇಲ್ಲ ಎಂದು ನುಡಿದರು.

ಮಾಜಿ ಸಚಿವ ನಾಗೇಂದ್ರ, ದದ್ದಲ್ ಅವರಷ್ಟೇ ಅಲ್ಲ, ಇನ್ನೂ ದೊಡ್ಡ ದೊಡ್ಡವರ ಹೆಸರು ಮುಂದೆ ಬರಲಿದೆ. ಹಾಗಾಗಿ ಆತಂಕದಿಂದಲೇ ನಿನ್ನೆ ರಾಜ್ಯದ ಐದು ಮಂದಿ ಸಚಿವರು ಈಡಿ ಮೇಲೆ ಆಪಾದನೆ ಮಾಡುವ ಪ್ರಯತ್ನ ಮಾಡಿದ್ದಾರೆ. ಅಧಿವೇಶನದಲ್ಲಿ ರಾಜ್ಯದ ಜನತೆಗೆ ಸಿಎಂ ತಪ್ಪು ಮಾಹಿತಿ, ತಪ್ಪು ಸಂದೇಶ ಕೊಡುವ ಪ್ರಯತ್ನ ಮಾಡಿದ್ದಾರೆ ಎಂದು ಅವರು ಟೀಕಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ವಾಲ್ಮೀಕಿ ನಿಗಮದ 187 ಕೋಟಿ ರೂ.ಹಣವನ್ನು ಈ ಸರಕಾರದ ಒಬ್ಬ ಸಚಿವರು, ಒಬ್ಬ ಶಾಸಕ, ಮುಖ್ಯಮಂತ್ರಿ ಸೇರಿ ಹಲವಾರು ಸಚಿವರು ಲೂಟಿ ಮಾಡಿ ಲೋಕಸಭಾ ಚುನಾವಣೆಗೆ ಬಳಸಿದ್ದು, ಅದು ಈ.ಡಿ. ಸ್ಪಷ್ಟಪಡಿಸಿದೆ. ಆ ಹಣ ಎಲ್ಲೆಲ್ಲಿ ಹೋಗಿದೆ? ಯಾವಾಗ ವಾಪಸ್ ತರುತ್ತೀರಿ ಎಂದು ಪ್ರಶ್ನಿಸಿದ್ದೇವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News