ಬಾಗಲಕೋಟೆ | ಅನುಮತಿಯಿಲ್ಲದೆ ಸ್ಥಾಪಿಸಿದ್ದ ಶಿವಾಜಿ ಪುತ್ಥಳಿ ತೆರವು; ಸಂಘಪರಿವಾರ ಕಾರ್ಯಕರ್ತರ ಪ್ರತಿಭಟನೆ, 2 ದಿನ ನಿಷೇಧಾಜ್ಞೆ ಜಾರಿ

Update: 2023-08-16 18:10 GMT

ಬಾಗಲಕೋಟೆ: ನಗರದ ಲಯನ್ಸ್ ಸರ್ಕಲ್ ಬಳಿ ಏಕಾಏಕಿ ಸ್ಥಾಪಿಸಲಾಗಿರುವ ಶಿವಾಜಿ ಮೂರ್ತಿ ತೆರವುಗೊಳಿಸಿದ್ದಕ್ಕೆ ಸ್ಥಳೀಯ ಬಿಜೆಪಿ ಮುಖಂಡರು ಸೇರಿ ಕೆಲವು ಸಂಘಪರಿವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸಾಕಷ್ಟು ಗಲಾಟೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಯಾಗಿದೆ.

ಶಿವಾಜಿ ಮೂರ್ತಿ ತೆರವುಗೊಳಿಸದಂತೆ ಒತ್ತಾಯಿಸಿ ನಗರದ ಲಯನ್ಸ್ ಸರ್ಕಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಪಕ್ಷದ ಮುಖಂಡರಾದ ನಾರಾಯಣಸಾ ಭಾಂಡೆಗೆ,ರಾಜು ನಾಯ್ಕರ,ಬಸವರಾಜ ಯಂಕಂಚಿ ಸೇರಿದಂತೆ ಇತರ ಕೆಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ

ಸ್ಳದಲ್ಲಿ ಬಿಗುವಿನ ಪರಿಸ್ಥಿತಿ ಇದ್ದು,  ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸ್ಥಳ ದಲ್ಲಿ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಜಯಪ್ರಕಾಶ ಹಕ್ಕರಕಿ ನೇತೃತ್ವದಲ್ಲಿ ಬೀಗಿ ಬಂದೂಬಸ್ತ್‌ ಏರ್ಪಡಿಸಲಾಗಿದೆ.

ʼʼಶಿವಾಜಿ ಮೂರ್ತಿಯನ್ನು ಅನಧಿಕೃತವಾಗಿ ಕೂಡಿಸಲಾಗಿದೆ. ಆದ್ದರಿಂದ ಅದನ್ನು ತೆರವುಗೊಳಿಸಬೇಕಾಗಿರುವುದರಿಂದ ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆ. 16ರಿಂದ ಅ. 18ರ ಮಧ್ಯರಾತ್ರಿಯವರೆಗೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆʼʼ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News