ಬಾಗಲಕೋಟೆ: ಲೋಕಾಯುಕ್ತ ದಾಳಿ ವೇಳೆ ಕೃಷಿ ನಿರ್ದೇಶಕಿ ಮನೆಯಲ್ಲಿ 2 ಆಮೆಗಳು ಪತ್ತೆ
Update: 2023-06-28 06:57 GMT
ಬಾಗಲಕೋಟೆ: ಲೋಕಾಯುಕ್ತ ದಾಳಿ ಸಮಯದಲ್ಲಿ ಅಧಿಕಾರಿಯೊಬ್ಬರ ಮನೆಯಲ್ಲಿ ಲಕ್ಷಾಂತರ ರೂಪಾಯಿಗಳ ಹಣ ಜೊತೆಗೆ ಎರಡು ನಕ್ಷತ್ರ ಆಮೆಗಳು ಪತ್ತೆಯಾಗಿದೆ.
ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆಗಿರುವ ಚೇತನಾ ಪಾಟೀಲ ಅವರ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ಮಾಡಿದ್ದರು,ಈ ಸಮಯದಲ್ಲಿ ದಾಖಲೆ ಹಾಗೂ ನಗದು ಹಣ ಪರಿಶೀಲನೆ ಮಾಡುವ ಸಮಯದಲ್ಲಿ 32 ಲಕ್ಷ ನಗದು ಹಣ ಹಾಗೂ ಎರಡು ಆಮೆ ದೂರಕಿದೆ ಎಂದು ತಿಳಿದು ಬಂದಿದೆ.
ಇವರು ಮನೆಯಲ್ಲಿ ಹಲವು ದಿನಗಳಿಂದ ಆಮೆ ಸಾಕಿದ್ದರು ಎನ್ನಲಾಗಿದೆ. ಅರಣ್ಯ ಕಾಯ್ದೆ ಅಡಿ ಪ್ರಾಣಿಗಳು ಸಾಕುವುದು ನಿಷೇಧ ಇದ್ದರೂ ಸಹ,ಸರ್ಕಾರಿ ಅಧಿಕಾರಿಯಾಗಿ ಕಾನೂನು ಉಲ್ಲಂಘನೆ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯ ಅಕ್ಕಿಮರಡಿ ಲೆಔಟಿನಲ್ಲಿರುವ ಮನೆಯಲ್ಲಿ ಚೇತನಾ ಪಾಟೀಲ ವಾಸವಿದ್ದಾರೆ.