ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ಸೇರಿ ಕೆಲವು ವಾಹನಗಳಿಗೆ ನಿಷೇಧ: ಹೆದ್ದಾರಿ ಪ್ರಾಧಿಕಾರ ಆದೇಶ

Update: 2023-07-25 08:12 GMT

ಬೆಂಗಳೂರು- ಮೈಸೂರು ಹೆದ್ದಾರಿ- ಸಂಗ್ರಹ ಚಿತ್ರ

ಬೆಂಗಳೂರು: ಮೈಸೂರು- ಬೆಂಗಳೂರು ನಡುವಿನ ಎಕ್ಸ್​ಪ್ರೆಸ್ ಹೈವೇಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿಷೇಧ ಹೇರಿದೆ. ಹೊಸ ಆದೇಶವು ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ. 

ಮೋಟಾರು ವಾಹನ ಕಾಯ್ದೆಯ ಅನ್ವಯ ಪ್ರಾಧಿಕಾರವು ಜುಲೈ 12ರಂದು ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಅದರಂತೆ ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ದ್ವಿಚಕ್ರ ವಾಹನ, ಮೂರು ಚಕ್ರದ ವಾಹನಗಳು, ಟ್ರಾಕ್ಟರ್‌ಗಳು ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧ ಹೇರಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಮಾರ್ಚ್‍ನಿಂದ ಜೂನ್ ತಿಂಗಳ ವರೆಗೆ 308 ಅವಘಾತಗಳು ಸಂಭವಿಸಿ 100 ಮಂದಿ ಮೃತಪಟ್ಟು, 335 ಜನ ಗಾಯಗೊಂಡಿದ್ದಾರೆ ಎಂದು ಇತ್ತೀಚೆಗೆ ಗೃಹ ಸಚಿವ ಪರಮೇಶ್ವರ್ ಸದನಕ್ಕೆ ಮಾಹಿತಿ ನೀಡಿದ್ದರು. 

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News