ಬೆಂಗಳೂರು| ಮಾಲ್ ಸಿಬ್ಬಂದಿಗೆ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‍ಐಆರ್ ದಾಖಲು

Update: 2023-12-24 12:59 GMT

ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‍ಐಆರ್ ದಾಖಲಾಗಿರುವುದು ವರದಿಯಾಗಿದೆ.

ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಎಂಬುವರು ನೀಡಿರುವ ದೂರಿನನ್ವಯ ಇಲ್ಲಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಡಿ.23 ರಂದು ಮಧ್ಯಾಹ್ನ ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾ ಬಳಿ ತೆರಳಿದ್ದ ಪುನೀತ್ ಕೆರೆಹಳ್ಳಿ ಮತ್ತವರ ಬೆಂಬಲಿಗರು, ಮಾಲ್ ಒಳಗೆ ಕ್ರಿಸ್ ಮಸ್ ಟ್ರೀ ಪ್ರದರ್ಶನ ಹಾಗೂ ಅದಕ್ಕೆ 200 ರೂ. ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿದ್ದಾರೆ. ಈ ವೇಳೆ ಮಾಲ್‍ನ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಬಳಿ ವಾಗ್ವಾದ ನಡೆಸಿದ್ದಾರೆ ಎಂದು ದೂರಲಾಗಿದೆ. ಅಲ್ಲದೇ ಡಿ.25 ಹಾಗೂ 31ರಂದು ಅದೇ ರೀತಿ ಗಲಾಟೆ ಮಾಡುವುದಾಗಿ ತಿಳಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News