ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ | ಬೆಂಗಳೂರು, ಮೈಸೂರು ಸೇರಿ ಹಲವೆಡೆ ನಾಳೆ(ಡಿ.12) ಮಳೆ ಸಾಧ್ಯತೆ
ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಡಿ.12ರಂದು ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೊಡಗು, ತುಮಕೂರು, ಕೋಲಾರ, ಚಿತ್ರುದುರ್ಗ, ಮಂಡ್ಯ, ಮೈಸೂರು, ರಾಮನಗರ ಹಾಗೂ ಚಾಮರಾಜನಗರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಡಿ.12ರಂದು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಂಜು ಇರುವ ಸಾಧ್ಯತೆಯಿದೆ.
ಡಿ.13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಡಿ.14 ಮತ್ತು 15ರಂದು ರಾಜ್ಯಾಂದ್ಯಂತ ಒಣ ಹವೆ ಇರುವ ಸಾಧ್ಯತೆ ಇದ್ದು, ಡಿ.16ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.