ಹೊಳೆನರಸೀಪುರ ಬಳಿ ಹಾಸನ–ಮೈಸೂರು ಹೆದ್ದಾರಿ ಮೇಲ್ಸೇತುವೆ ತಡೆಗೋಡೆ ಕುಸಿತ

Update: 2023-07-28 06:51 GMT

ಹಾಸನ, ಜು.28: ಇಲ್ಲಿನ ಹಾಸನ–ಮೈಸೂರು ಹೆದ್ದಾರಿ ಮೇಲ್ಸೇತುವೆಯ ತಡೆಗೋಡೆ ಕುಸಿದಿದ್ದು, ಈ ಮೇಲ್ಸೇತುವೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ.

ಹಾಸನದಿಂದ ಹೊಳೆನರಸೀಪುರಕ್ಕೆ ತೆರಳುವ ಮಾರ್ಗ ಮಧ್ಯೆ ಹಂಗರಹಳ್ಳಿ ಬಳಿ ಈ ಘಟನೆ ನಡೆದಿದೆ. 

ನಿರ್ಮಾಣ ಹಂತದಲ್ಲಿರುವಾಗಲೇ ಎರಡು ಬಾರಿ ಫ್ಲೈಓವರ್ ಸ್ಲ್ಯಾಬ್‌ಗಳು ಕುಸಿದಿದ್ದರೂ, ಗುತ್ತಿಗೆದಾರ ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಳ್ಳದೆ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News