ವಿಧಾನ ಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಪ್ರಮಾಣ ವಚನ ಸ್ವೀಕಾರ

Update: 2024-07-11 10:27 GMT

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ಆಯ್ಕೆಯಾಗಿರುವ ಬಸನಗೌಡ ಬಾದರ್ಲಿ ಅವರು ಗುರುವಾರ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬಸನಗೌಡ ಬಾದರ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಈ ವೇಳೆ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಭೋಸರಾಜು, ರಾಜ್ಯ ವಿಧಾನ ಪರಿಷತ್ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಶಾಸಕ ಸಲೀಂ ಅಹಮದ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News