ಬಿಜೆಪಿಯಿಂದ ಉಚ್ಚಾಟನೆ | ʼಸತ್ಯವಂತರಿಗಿದು ಕಾಲವಲ್ಲʼ ಎಂದ ಯತ್ನಾಳ್‌

Update: 2025-03-26 19:48 IST
ಬಿಜೆಪಿಯಿಂದ ಉಚ್ಚಾಟನೆ | ʼಸತ್ಯವಂತರಿಗಿದು ಕಾಲವಲ್ಲʼ ಎಂದ ಯತ್ನಾಳ್‌
  • whatsapp icon

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ವಿರುದ್ದ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಬಿಜೆಪಿ ಹೈಕಮಾಂಡ್ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಮೊದಲ ಪ್ರತಿಕ್ರಿಯೆ ನೀಡಿರುವ ಯತ್ನಾಳ್‌, ʼಇದು ಸತ್ಯವಂತರಿಗೆ ಕಾಲವಲ್ಲʼ ಎಂದು ಹೇಳುವ ಮೂಲಕ ಬಿಜೆಪಿ ಹೈಕಮಾಂಡ್‌ಗೆ ತಿರುಗೇಟು ನೀಡಿದ್ದಾರೆ.

ತಮ್ಮ ಉಚ್ಚಾಟನೆಯ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು,"ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ. 'ಇದ್ದಿದ್ದು ಇದ್ದ ಹಾಗೆ ನಾನು ಹೇಳೀರುವ ವಿಚಾರಕ್ಕೆ' ಪಕ್ಷವು ನನಗೆ ಈ ಪ್ರತಿಫಲ ನೀಡಿದೆ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ. ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ತಡೆಯುವುದಿಲ್ಲ. ನಾನು ನನ್ನ ಜನರಿಗೆ ಅದೇ ಹುರುಪು ಮತ್ತು ದೃಢತೆಯಿಂದ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ. ಎಲ್ಲಾ ಕಾರ್ಯಕರ್ತರಿಗೆ, ಹಿತೈಷಿಗಳಿಗೆ, ಸ್ನೇಹಿತರಿಗೆ, ಪರಿಚಯಸ್ಥರಿಗೆ, ಸ್ವಾಮೀಜಿಗಳಿಗೆ, ಮಾಧ್ಯಮಗಳಿಗೆ, ಬೆಂಬಲದ ಆಧಾರಸ್ತಂಭವಾಗಿರುವ ನನ್ನ ಕುಟುಂಬಕ್ಕೆ ಮತ್ತು ಸರ್ವಶಕ್ತನಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

‘ಈ ಬಗ್ಗೆ ಬರೆಯುವಾಗ ನನಗೆ ಪುರಂದರ ದಾಸರ ಪದವೊಂದು ನೆನಪಾಗುತ್ತಿದೆ’ ಎಂದು ಈ ಕೆಳಗಿನ ಪದ ಬರೆದುಕೊಂಡಿದ್ದಾರೆ.

ಸತ್ಯವಂತರಿಗಿದು ಕಾಲವಲ್ಲ

ದುಷ್ಟಜನರಿಗೆ ಸುಭಿಕ್ಷಕಾಲ ||

ಉಪಕಾರ ಮಾಡಿದರೆ ಅಪಕರಿಸುವ ಕಾಲ

ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ

ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ

ಸತ್ಯವಂತರಿಗಿದು ಕಾಲವಲ್ಲ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News