ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ , ಕುಮಾರಸ್ವಾಮಿ ರಾಜೀನಾಮೆ

Update: 2024-06-15 13:21 GMT

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಈ.ತುಕಾರಾಂ ಶಾಸಕ ಸ್ಥಾನಕ್ಕೆ ಹಾಗೂ ಕೋಟ ಶ್ರೀನಿವಾಸ್ ಪೂಜಾರಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ(ಚನ್ನಪಟ್ಟಣ), ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ(ಶಿಗ್ಗಾಂವಿ) ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಂ(ಸಂಡೂರು) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸ್ಪೀಕರ್ ಯು.ಟಿ.ಖಾದರ್ ಅವರನ್ನು ಮೇಲ್ಕಂಡ ಮೂವರು ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿರುವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿ ಮಾಡಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಲೋಕಸಭೆಗೆ ಆಯ್ಕೆಯಾಗಿರುವ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ತುಕಾರಾಂ ಹಾಗೂ ಕೋಟ ಶ್ರೀನಿವಾಸ ಪೂಜಾರಿಗೆ ಸ್ಪೀಕರ್ ಖಾದರ್ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಸನ್ಮಾನಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News