ಬಿಬಿಎಂಪಿ ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ : ಕೆಪಿಎಸ್ಸಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬಿಬಿಎಂಪಿಯಲ್ಲಿ 100 ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ ಸಂಬಂಧ ಕೆಪಿಎಸ್ಸಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನಗರದಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಸರ್ಕಾರ ಹಾಗೂ ಬಿಬಿಎಂಪಿಗೆ ಅಗತ್ಯ ನಿರ್ದೇಶನ ನೀಡಲು ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. 2023ರ ಅಕ್ಟೋಬರ್ ತಿಂಗಳಲ್ಲಿ ಅರ್ಜಿ ವಿಚಾರಣೆ ನಡೆಸಿದಾಗ, ಅಕ್ರಮ ಕಟ್ಟಡಗಳನ್ನು ಗುರುತಿಸಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕಿರುವುದು ಎಂಜಿನಿಯರಿಂಗ್ ವಿಭಾಗದ ಕರ್ತವ್ಯವಾಗಿದೆ. ಆದರೆ, ಬಿಬಿಎಂಪಿಯಲ್ಲಿ 100ಕ್ಕೂ ಅಧಿಕ ಸಹಾಯಕ ಹುದ್ದೆಗಳು ಭರ್ತಿಯಾಗಿಲ್ಲ. ಬಿಬಿಎಂಪಿಯಲ್ಲಿ ಎರವಲು ಸೇವೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಎಂಜನಿಯರ್ ಗಳು ಮಾತೃ ಇಲಾಖೆಗೆ ಹೋಗಬೇಕಿದೆ ಎಂದು ನ್ಯಾಯಾಲಯ ಗಮನಿಸಿತ್ತು.
ಹಾಗಾಗಿ, ಎಂಜಿನಿಯರಿಂಗ್ ಹುದ್ದೆಗಳ ನೇಮಕಕ್ಕೆ ಆದೇಶಿಸಿತ್ತು. ಎಂಜಿನಿಯರ್ ನೇಮಕಾತಿಯನ್ನು ಕೆಪಿಎಸ್ಸಿ ಮಾಡಬೇಕಿರುವುದರಿಂದ ಹೈಕೋರ್ಟ್ ಬುಧವಾರ ನೋಟಿಸ್ ಜಾರಿಗೊಳಿಸಿದೆ.