ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿರುವ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ನಿಧನ ಹೊಂದಿಲ್ಲ: ತುಷಾರ್ ಗಿರಿನಾಥ್ ಸ್ಪಷ್ಟನೆ
ಬೆಂಗಳೂರು, ಆ. 28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಪ್ರಯೋಗಾಲಯದಲ್ಲಿ ನಡೆದ ಅಗ್ನಿ ಅನಾಹುತದಲ್ಲಿ ತೀವ್ರ ಗಾಯಗೊಂಡಿರುವ ಗುಣ ನಿಯಂತ್ರಣ ವಿಭಾಗದ ಮುಖ್ಯ ಅಭಿಯಂತರ ಶಿವಕುಮಾರ್ ಸ್ಥಿರವಾಗಿದ್ದು, ಅವರ ಆರೋಗ್ಯ ಕುರಿತು ಸುಳ್ಳು ವದಂತಿಗಳನ್ನು ನಿಲ್ಲಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಶೇμÁದ್ರಿಪುರ ಅಪೆÇೀಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಜ್ಞ ವೈದ್ಯರಿಂದ ಉತ್ತಮ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆದರೆ, ಕೆಲ ಮಾಧ್ಯಮಗಳು ಶಿವಕುಮಾರ್ ಸಾವನ್ನಪ್ಪಿದ್ದಾರೆ ಎಂದು ಸುದ್ದಿಯನ್ನು ಪ್ರಸರಿಸುತ್ತಿದ್ದು, ವೈದ್ಯರು ಅಧಿಕೃತವಾಗಿ ಮಾಹಿತಿ ನೀಡುವವರೆಗೆ ಮತ್ತು ಮೆಡಿಕಲ್ ಬುಲೆಟಿನ್ ನೀಡುವ ವರೆಗೆ ಈ ಕುರಿತು ವದಂತಿಗಳನ್ನು ಪ್ರಸಾರ ಮಾಡಬೇಡಿ ಎಂದರು.
ಡಿಸಿಎಂ ಭೇಟಿ: ಶೇಷಾದ್ರಿಪುರ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಸ್ಥಿತಿ ಹೆಚ್ಚು ಗಂಭೀರವಾಗಿದ್ದು, ಕೃತಕ ಉಸಿರಾಟದ ಜೊತೆಗೆ ಶೇಷಾದ್ರಿಪುರದಲ್ಲಿರುವ ಅಪೋಲೊ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದರು.
ಅದೇರೀತಿ,ಅಲ್ಪ ಸುಧಾರಿಸಿಕೊಂಡಿದ್ದ ಆಪರೇಟರ್ ಜ್ಯೋತಿ ಅವರ ಸ್ಥಿತಿ ಅಷ್ಟೊಂದು ಗಂಭೀರವಿಲ್ಲ. ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ. ವಿಜಯಮಾಲ ಹಾಗೂ ಶ್ರೀನಿವಾಸ್ ಅವರ ಸ್ಥಿತಿ ಉತ್ತಮವಾಗಿದ್ದು, ತೀವ್ರ ನಿಗಾ ಘಟಕದಲ್ಲಿದ್ದಾರೆ. ಮನೋಜ್, ಸಿರಾಜ್, ಶ್ರೀಧರ್, ಸಂತೋಷ್ ಕುಮಾರ್ ಆರೋಗ್ಯ ಸುಧಾರಿಸಿದ್ದು, ಅವರನ್ನು ವಾರ್ಡ್‍ಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದರು.