BBMP: 225 ವಾರ್ಡ್‍ಗಳ ನಕ್ಷೆ ಬಿಡುಗಡೆ ಮಾಡಿದ ಸರಕಾರ

Update: 2023-10-01 11:54 GMT

ಬೆಂಗಳೂರು, ಅ.1: ಈಗಾಗಲೇ ಬಿಬಿಎಂಪಿಯ ಒಟ್ಟು 225 ವಾರ್ಡ್‍ಗಳನ್ನು ಅಂತಿಮಗೊಳಿಸಿ ರಾಜ್ಯ ಸರಕಾರ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದ್ದು, ಈಗ ವಾರ್ಡ್‍ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದೆ. ತಮ್ಮ ವಾರ್ಡ್‍ಗಳ ನಕ್ಷೆಯನ್ನು http://bbmpdelimitation2023.com/ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದು.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸ್ಸುಗಳನ್ನು ಸರಕಾರವು ಒಪ್ಪಿಕೊಂಡಿದೆ.

ಅದರಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿನಿಯಮ, 2020ರ ಕಲಂ 7ರಲ್ಲಿ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡ್‍ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಲಾಗಿದೆ.

ಪುನರ್ ಪರಿಶೀಲನೆ ಮಾಡಿ ಪಾಲಿಕೆ 225 ವಾರ್ಡ್‍ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಆ.18ರಂದು ವಾರ್ಡ್ ಮರುವಿಂಗಡನೆಯ ಕರಡು ಪಟ್ಟಿಯನ್ನು ಪ್ರಕಟಿಸಿದ್ದ ಸರಕಾರ, ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News