ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಅವಘಡ ಪ್ರಕರಣ: ಇಬ್ಬರು ಪೊಲೀಸ್ ವಶಕ್ಕೆ

Update: 2023-08-12 09:35 GMT

ಬೆಂಗಳೂರು: ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ನೌಕರರನ್ನು ಪೊಲೀಸರು ವಶಕ್ಕೆ ಪಡೆದಿರುವುದು ವರದಿಯಾಗಿದೆ. 

ಪೊಲೀಸರು ಶುಕ್ರವಾರ ತಡ ರಾತ್ರಿ ಇಬ್ಬರು ಎಂಜಿನಿಯರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಇವರು ಘಟನಾ ಸ್ಥಳದಲ್ಲಿದ್ದರೂ ಗಾಯಗೊಂಡಿಲ್ಲ. ಇದರಿಂದ ಅನುಮಾನಗೊಂಡಿರುವ ಇವರನ್ನು ವಶಕ್ಕೆ ಪಡೆದು ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 

ʼಬೆಂಕಿ ಅವಘಡದಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದು, ಬಳಿಕ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.‌

ತನಿಖೆಗೂ ಮುನ್ನ ಅಗ್ನಿ ಅವಘಡದ ಬಗ್ಗೆ ಅಂತಿಮ ತೀರ್ಮಾನ ಬೇಡ: ಡಿ.ಕೆ ಶಿವಕುಮಾರ್‌

"ಈ ದುರ್ಘಟನೆ ಬಗ್ಗೆ ನಾನು ತನಿಖೆಗೆ ಆದೇಶಿಸಿದ್ದೇನೆ. ಬಿಬಿಎಂಪಿ ಅಧಿಕಾರಿಗಳು, ಪೊಲೀಸರು ಹಾಗೂ ಚುನಾಯಿತ ಪ್ರತಿನಿಧಿಗಳ ತಂಡಗಳಿಂದ ಈ ಪ್ರಕರಣದ ವಿಚಾರಣೆಗೆ ಆದೇಶಿಸಿದ್ದೇನೆ. ಈ ಪ್ರಯೋಗಾಲಯ ಇದ್ದ ಜಾಗ ಸೂಕ್ತವಾಗಿರಲಿಲ್ಲ. ಇಂತಹ ಪ್ರಯೋಗಾಲಯಗಳನ್ನು ಈ ಜಾಗದಲ್ಲಿ ಇಟ್ಟಿರುವುದು ತಪ್ಪು. ಎಲ್ಲಾದರೂ ಮುಕ್ತ ಪ್ರದೇಶದಲ್ಲಿ ಇಡಬೇಕು. ಇದೆಲ್ಲದರ ಬಗ್ಗೆ ತನಿಖೆ ಮುಗಿದು ವರದಿ ಬಂದ ನಂತರ ನಾನು ಇನ್ನಷ್ಟು ಮಾಹಿತಿ ನೀಡುತ್ತೇನೆ" ಎಂದು ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News