ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬಾರ್ ಗೆ ಬಿಬಿಎಂಪಿಯಿಂದ ನೋಟಿಸ್ ಜಾರಿ

Update: 2024-12-21 07:18 GMT

PC: x.com/24onlive

ಬೆಂಗಳೂರು, ಡಿ‌.21- ಹೆಸರಾಂತ ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ಗೆ ಸಂಕಷ್ಟ ಎದುರಾಗಿದ್ದು, ಬಿಬಿಎಂಪಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದ ಒನ್8 ಕಮ್ಯೂನ್ ಬಾರ್ ಆಂಡ್ ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದ್ದು, ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಲಾಗಿದೆ.

ಸಾಮಾಜಿಕ ಕಾರ್ಯಕರ್ತ ಹೆಚ್‌ಎಂ ವೆಂಕಟೇಶ್ ಎನ್ನುವವರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದು, ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ದರೂ ಕೂಡ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದ್ದು, ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ಸಮಜಾಯಿಷಿಯನ್ನು ಕೇಳಿ ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News