ಬೆಳಗಾವಿ ಅಧಿವೇಶನ | ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

Update: 2024-12-17 14:54 GMT

ಬೆಳಗಾವಿ : ರಾಜ್ಯ ಸರಕಾರದ ಹೊಸದಿಲ್ಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ‘ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ’ ಮಾಡಿ ಗೌರವಿಸಲಾಯಿತು.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ ಸ್ಪೀಕರ್ ಯು.ಟಿ.ಖಾದರ್ ಅವರು ತಮ್ಮ ಪೀಠಕ್ಕೆ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ಆಹ್ವಾನಿಸಿದರು. ಈ ವೇಳೆ ಸಭಾ ನಾಯಕರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಸೇರಿ ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿದರು.

ತುಮಕೂರು ಜಿಲ್ಲೆಯ ಸಿರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರು ಹಿರಿಯರು. ಸದನಕ್ಕೆ ಸಮಯಕ್ಕೆ ಸರಿಯಾಗಿ ಆಗಮಿಸುವುದಲ್ಲದೆ, ಕಾರ್ಯ ಕಲಾಪ ಮುಕ್ತಾಯವಾಗುವವರೆಗೆ ಸದನದಲ್ಲಿ ಹಾಜರಿರುತ್ತಾರೆ. ಯಾವುದೇ ಅನಗತ್ಯ ಚರ್ಚೆಗೆ ಮುಂದಾಗದೆ ಸದನಕ್ಕೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ಮಾಡುತ್ತಿದ್ದಾರೆಂದು ಸ್ಪೀಕರ್ ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು. ಆ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸೇರಿದಂತೆ ಪಕ್ಷಬೇಧ ಮರೆತು ಎಲ್ಲ ಸದಸ್ಯರು ಜಯಚಂದ್ರ ಅವರನ್ನು ಅಭಿನಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News