ಸಾಹಿತಿ ‘ಬೇಂದ್ರೆ ಕೃಷ್ಣಪ್ಪ’ ನಿಧನ

Update: 2025-01-28 16:05 GMT
Photo of Bendre Krishnappa

ಬೇಂದ್ರೆ ಕೃಷ್ಣಪ್ಪ (Photo credit: bookbrahma.com)

  • whatsapp icon

ಬೆಂಗಳೂರು: ಸಾಹಿತಿ, ನಾಡೋಜ ‘ಬೇಂದ್ರೆ ಕೃಷ್ಣಪ್ಪ’ ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ನಿಧನರಾಗಿದ್ದು, ಅವರಿಗೆ 77 ವರ್ಷ ವಯಸ್ಸಾಗಿತ್ತು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಇಲ್ಲಿನ ಶ್ರೀನಿಕೇತನ ಲೇಔಟ್‍ನ ಅವರ ಸ್ವಗೃಹ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಸಂಜೆ 4 ಗಂಟೆ ವೇಳೆಗೆ ಇಲ್ಲಿನ ಮೇದಿ ಅಗ್ರಹಾರದಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

ಇವರು ‘ಬೇಂದ್ರೆ ಸಾಹಿತ್ಯದಲ್ಲಿ ಸ್ತ್ರೀ: ಒಂದು ಅಧ್ಯಯನ’ ಕುರಿತು ಪಿಎಚ್ಡಿ ಪದವಿಯನ್ನು ಪಡೆದಿದ್ದರು. ಸತತ ಮೂರು ದಶಕಗಳಿಂದ ಶಾಲಾ-ಕಾಲೇಜುಗಳಲ್ಲಿ 600ಕ್ಕೂ ಅಧಿಕ ಬೇಂದ್ರೆ ಕಾವ್ಯಗಾಯನ ಸ್ಪರ್ಧೆ ಆಯೋಜನೆಯನ್ನು ಮಾಡಿದ್ದರು. ಬೇಂದ್ರೆ ಕಾವ್ಯ ಕೂಟ ಸ್ಥಾಪಿಸಿದ ಇವರು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೇಂದ್ರೆ ಕಾವ್ಯ ವಿಮರ್ಶೆ ಆಯೋಜಿಸಿ ಬಹುಮಾನ ವಿತರಣೆ ಮಾಡುತ್ತಿದ್ದರು.

ಕೃಷ್ಣಪ್ಪ ಸಾಹಿತ್ಯ ಸೇವೆಗೆ ಡಾ.ಜಿ.ಪಿ.ರಾಜರತ್ನಂ ಕನ್ನಡ ಸಾಹಿತ್ಯ ಪರಿಚಾರಕ ಪ್ರಶಸ್ತಿ, ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, 2018ನೆ ಸಾಲಿನ ಸಾಹಿತ್ಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ 2021ನೆ ಸಾಲಿನ ಪುಸ್ತಕ ಬಹುಮಾನ ಇವರಿಗೆ ಲಭಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News