ಸೆ.26ಕ್ಕೆ ಬೆಂಗಳೂರು ನಗರ ಬಂದ್‌ ಗೆ ಕರೆ

Update: 2023-09-23 09:10 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26ಕ್ಕೆ ಬೆಂಗಳೂರು ನಗರ ಬಂದ್‌ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. 

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ʼʼಬೆಂಗಳೂರು ಬಂದ್ ದಿನ ಟೌನ್ ಹಾಲ್​​ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆʼʼ ಎಂದು ತಿಳಿಸಿದರು. 

ʼʼಸೆ.26 ರಂದು ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವಂತೆ ಮನವಿ ಮಾಡಿಕೊಂಡ ಅವರು, ಇದು ನಮ್ಮ ಬಂದ್‌ ಅಲ್ಲ, ರಾಜ್ಯದ ರೈತರ ಪರವಾಗಿ ಬೆಂಗಳೂರಿನ ನಾಗರಿಕರ ಬಂದ್‌ʼʼ ಎಂದು ಅವರು ತಿಳಿಸಿದರು. 

ʼʼಬೆಂಗಳೂರಿನಲ್ಲಿ 1.30 ಲಕ್ಷ ಜನ ಇದ್ದು, ಇದರಲ್ಲಿ 65 ಲಕ್ಷ ಜನ ಬೇರೆ ಭಾಷಿಕರು ಇದ್ದಾರೆ. ಅವರಿಗೂ ಕುಡಿಯುವ ನೀರಿನ ಅವಶ್ಯಕತೆ ಇದೆ. 45 ದಿನಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಿದ್ದರೂ ಬೆಂಗಳೂರಿನ ಜನ ಮಲಗಿದ್ದಾರೆ. ಇದು ಸರಿಯಲ್ಲʼʼ ಎಂದು ಹೇಳಿದರು.

ʼʼಯಾವುದೇ ಭಾಷಿಕರು ಆದರೂ ಕುಡಿಯಲು, ಬಳಸಲು ನೀರು ಮುಖ್ಯ ಆದ್ದರಿಂದ ಎಲ್ಲರೂ ಈ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಜನರ ಬದುಕು ಮುಖ್ಯ, ಯಾವುದೇ ಆದೇಶ ಏನೂ ಮಾಡಲು ಆಗಲ್ಲ. ಕುಡಿಯುವ ನೀರಿಗೆ ಆದ್ಯತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆʼʼ ಎಂದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News