ಬೆಂಗಳೂರು: ಮನೆಗೆ ನುಗ್ಗಿ ಮಹಿಳಾ ಅಧಿಕಾರಿಯ ಭೀಕರ ಹತ್ಯೆ

Update: 2023-11-05 13:59 GMT

ಕೊಲೆಗೀಡಾದ ಅಧಿಕಾರಿ

ಬೆಂಗಳೂರು, ನ.5: ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಪ್ರತಿಮಾ ಕೆ.ಎಸ್. (37) ಅವರನ್ನು ಹತ್ಯೆಗೈದಿರುವ ಘಟನೆ ಇಲ್ಲಿನ ಸುಬ್ರಹ್ಮಣ್ಯಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶನಿವಾರ ತಡರಾತ್ರಿ ದೊಡ್ಡಕಲ್ಲಸಂದ್ರದ ಗೋಕುಲ ಅಪಾಟ್ಮೆರ್ಂಟ್‍ನಲ್ಲಿ ಕೊಲೆಯಾಗಿರುವ ಸ್ಥಿತಿಯಲ್ಲಿ ಪ್ರತಿಮಾ ಅವರ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುಡ್ಕಿ ಮೂಲದ ಪ್ರತಿಮಾ ಅವರಿಗೆ 18 ವರ್ಷಗಳ ಹಿಂದೆ ವಿವಾಹವಾಗಿತ್ತು. ನಂತರ ಭೂ ವಿಜ್ಞಾನ ಇಲಾಖೆಯಲ್ಲಿ ನೌಕರಿ ದೊರೆತಿದ್ದರಿಂದ ಪ್ರತಿಮಾ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಪತಿ ಹಾಗೂ ಓರ್ವ ಪುತ್ರ ತೀರ್ಥಹಳ್ಳಿಯಲ್ಲಿ ವಾಸವಿದ್ದರು ಎಂದು ಮೂಲಗಳು ತಿಳಿಸಿವೆ.

ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್ ಮೆಂಟ್ ನಲ್ಲಿ ಎಂಟು ವರ್ಷಗಳಿಂದ ವಾಸವಿದ್ದರು. ಶನಿವಾರ ರಾತ್ರಿ 8 ಗಂಟೆಗೆ ಕಚೇರಿಯಿಂದ ಮನೆಗೆ ಪ್ರತಿಮಾ ಅವರನ್ನು ಕಾರು ಚಾಲಕ ಬಿಟ್ಟು ತೆರಳಿದ್ದ. ಬಳಿಕ ರಾತ್ರಿ ವೇಳೆ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಪ್ರತಿಮಾ ಸಹೋದರ ಪ್ರತೀಶ್, ನಾನು ನಿತ್ಯ ಪ್ರತಿಮಾಗೆ ಕರೆ ಮಾಡಿ ಮಾತನಾಡುತ್ತಿದ್ದೆ. ಇವತ್ತು ಒಂದು ಮದುವೆಗೆ ಹೋಗಬೇಕಿದ್ದಿದ್ದರಿಂದ ನಿನ್ನೆ ರಾತ್ರಿಯಿಂದ ಕರೆ ಮಾಡುತ್ತಿದ್ದೆ. ಆದರೆ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಕರೆ ಮಾಡಿದಾಗಲೂ ಸ್ವೀಕರಿಸಿರಲಿಲ್ಲ. ಆದ್ದರಿಂದ ಕೆಳಗಿನ ಮನೆಯವರಿಗೆ ಸಂಪರ್ಕಿಸಿ ತಿಳಿಸಿದ್ದೆವು. ಅವರು ಬಂದು ನೋಡಿದಾಗ ಕೊಲೆಯಾಗಿರುವುದು ಗೊತ್ತಾಗಿದೆ. ಕೆಲಸದ ವಿಚಾರವಾಗಿ ಏನೂ ಸಮಸ್ಯೆ ಇರಲಿಲ್ಲ. ಆ ರೀತಿ ಇದ್ದಿದ್ದರೆ ನನಗೆ ಹೇಳುತ್ತಿದ್ದಳು. ಮನೆಯಲ್ಲಿಯೂ ಏನೂ ಕಳ್ಳತನವಾಗಿಲ್ಲ. ಪೊಲೀಸ್ ಇಲಾಖೆ ಮೇಲೆ ನಂಬಿಕೆಯಿದೆ. ಸೂಕ್ತ ತನಿಖೆ ನಡೆಸುತ್ತಾರೆ ಎಂದರು.

 ಜಿಲ್ಲಾಧಿಕಾರಿ ಹೇಳಿದ್ದೇನು?  

‘ಕೆಲಸದ ಸಂಬಂಧ ಯಾವುದೇ ಸಮಸ್ಯೆ ಇರಲಿಲ್ಲ, ಆ ರೀತಿಯ ಯಾವುದೇ ದೂರು ಬಂದಿಲ್ಲ. ತಮಿಳುನಾಡಿನ ಕಡೆಗೆ ಬರುವ ಲಾರಿಗಳನ್ನು ತಡೆಯೋಕೆ ಹೇಳಿದ್ದೆ. ಯಾವ ಕಾರಣಕ್ಕಾಗಿ ಕೊಲೆಯಾಗಿದೆ ಎಂಬುದರ ಬಗ್ಗೆ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News