ಬೆಂಗಳೂರು: ಬೊಮ್ಮನಹಳ್ಳಿ ಪ್ರದೇಶದಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ
ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡು ಈ ಭಾಗದ ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಇಂದು (ಬುಧವಾರ) ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಳೆದ 4 ದಿನಗಳಿಂದ ಕಾರ್ಯಾಚರಣೆ ನಡೆಸಿದ್ದರು. ನಿನ್ನೆ ಮೈಸೂರಿನಿಂದ ತಜ್ಞರ ತಂಡ ಸಹ ಆಗಮಿಸಿತ್ತು.
ಅಕ್ಟೋಬರ್ 27 ರಂದು ರಾತ್ರಿ ಚಿರತೆ ಸಿಂಗಸಂದ್ರದ ಸಮೀಪ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಅಂದಿನಿಂದ ಚಿರತೆ ಕಾಣಿಸಿಕೊಂಡಿರಲಿಲ್ಲ.
ಆ ಬಳಿಕ ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಲೇಔಟ್‌ನ ಬಾಳುಬಿದ್ದ ಬೃಹತ್ ಕಟ್ಟಡವೊಂದರಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಚಿರತೆಯ ಸುಳಿವು ಅಲ್ಲಿಯೂ ಸಿಗಲಿಲ್ಲ. ಕಟ್ಟಡದ ಸುತ್ತಮುತ್ತಲಿನ ಐದು ಸ್ಥಳದಲ್ಲಿ ಬೋನ್‌ಗಳನ್ನು ಇಡಲಾಗಿತ್ತು. ಸದ್ಯ ಕೊನೆಗೂ ಚಿರತೆ ಸೆರೆ ಸಿಕ್ಕಿದೆ.