ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅರ್ಜಿ
ಬೆಂಗಳೂರು : ಮೈಸೂರಿನ ಕೆ.ಆರ್.ನಗರದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಜೊತೆಗೆ ಮಧ್ಯಂತರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಿತು. ಈ ವೇಳೆ ಭವಾನಿ ಪರ ವಕೀಲರು ವಾದ ಮಂಡಸಿ, “ಎಸ್ಐಟಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ನೋಟಿಸ್ ನೀಡಿದ್ದಾರೆ. ಯಾವ ನಿಯಮದಡಿ ನೋಟಿಸ್ ನೀಡಿದ್ದಾರೆಂದು ಎಸ್ಐಟಿ ತಿಳಿಸಿಲ್ಲ. ಭವಾನಿ ರೇವಣ್ಣಗೂ ಬಂಧನದ ಭೀತಿ ಇದೆ. ಹೀಗಾಗಿ ಜಾಮೀನು ನೀಡಬೇಕು” ಎಂದು ಮನವಿ ಮಾಡಿದರು.
ಈ ವೇಳೆ ವಾದ ಆಲಿಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿ ಜೊತೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ, ಮಂಗಳವಾರಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ.