ಬೀದರ್​​: ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳ ಬಂಧನ

Update: 2023-09-25 05:23 GMT

ಚಿತ್ರ-  ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿರುವುದು | ಪೊಲೀಸ್‌ ವಶದಲ್ಲಿ ಆರೋಪಿಗಳು

ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಸೆ.21ರಂದು ತಡರಾತ್ರಿ ಮಸೀದಿಯೊಂದರ ಮೇಲೆ ಕೇಸರಿ ಧ್ವಜ ಅಳವಡಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ್ ಬಿರಾದಾರ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ಧಾರೆ. 

ಸೆ.21ರಂದು ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ತಡರಾತ್ರಿ ಭಾಗವಾಧ್ವಜ ಹಾರಿಸಿ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟು ಮಾಡಿದ್ದರು. ಅಂದು ಬೆಳಗ್ಗೆ ವಿಷಯ ತಿಳಿದು ಸ್ಥಳಕ್ಕೆ ಬಂದ ಬಸವಕಲ್ಯಾಣ ಗ್ರಾಮೀಣ ಪೊಲೀಸರು ಗ್ರಾಮಸ್ಥರ ಮನವೊಲಿಸಿ ಕೇಸರಿ ಧ್ವಜ ತೆಗೆಸುವಲ್ಲಿ ಯಶಸ್ವಿಯಾಗಿದ್ದರು. 

ಈ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News