ಲೈಂಗಿಕ ಹಗರಣ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಶಾಸಕ ಪ್ರೀತಮ್ ಗೌಡ ಅವರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ನೀಡಿದೆ. ಇದರಿಂದ ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಬಂಧನದಿಂದ ರಿಲೀಫ್ ಸಿಕ್ಕಿದೆ.
ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ವಿರುದ್ಧ ಎಫ್ಐಆರ್ ಹಿನ್ನೆಲೆಯಲ್ಲಿ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ಪ್ರಶ್ನಿಸಿ ಪ್ರೀತಮ್ ಗೌಡ ರಿಟ್ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿ ವಿಚಾರಣೆ ನಡೆಸಿ ಮೇಲಿನ ಆದೇಶ ನೀಡಿದೆ. ಅಲ್ಲದೆ ತನಿಖೆ ಮುಂದುವರಿಸಲು ಎಸ್ಐಟಿ ಗೆ ಹೈಕೋರ್ಟ್ ಸೂಚಿಸಿರುವ ಹೈಕೋರ್ಟ್ ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಮ್ ಗೌಡಗೆ ಸೂಚನೆ ನೀಡಿದೆ.
ವಿಚಾರಣೆ ವೇಳೆ ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ತಮ್ಮ ಮೇಲೆ ಯಾವುದೇ ಆರೋಪವಿಲ್ಲದಿದ್ದರೂ ಎಫ್ಐಆರ್ ಮಾಡಲಾಗಿದೆ. ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಜನ ಮಾತನಾಡುತ್ತಿದ್ದರೆಂಬ ಆಧಾರದ ಮೇಲೆ ಕೇಸ್ ಹಾಕಿದ್ದಾರೆ ಎಂದು ವಾದಿಸಿದರು. ವಾದ ಆಲಿಸಿದ ಪೀಠ ಮಧ್ಯಂತರ ಆದೇಶ ನೀಡಿದೆ.