‘ಬಿಗ್‍ಬಾಸ್ ಶೋ’ನಲ್ಲಿ ಮಹಿಳೆಯರ ಅಕ್ರಮ ಬಂಧನ ಆರೋಪ : ಕ್ರಮಕ್ಕೆ ಸೂಚಿಸಿ ಎಸ್ಪಿಗೆ ಪತ್ರ ಬರೆದ ಮಹಿಳಾ ಆಯೋಗ

Update: 2024-10-08 15:28 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿದೆ ಎಂಬ ಆರೋಪದ ಮೇಲೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಐದು ದಿನದೊಳಗೆ ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಗಳವಾರ ಪತ್ರ ಬರೆದಿದೆ.

ಮಂಗಳವಾರ ಈ ಕುರಿತಾಗಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಪತ್ರ ಬರೆದಿದ್ದು, ವಾಹಿನಿಯ ಬಿಗ್‍ಬಾಸ್ ಕಾರ್ಯಕ್ರಮದ ರೂಪುರೇಷೆ, ನಿಯಮಗಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ಐದು ದಿನದೊಳಗೆ ವರದಿ ನೀಡಬೇಕೆಂದು ಪತ್ರದಲ್ಲಿ ಗಡುವು ನೀಡಲಾಗಿದೆ.

ಬಿಗ್ ಬಾಸ್ ರಿಯಾಲಿಟಿ ಶೋನ 11ನೇ ಆವೃತ್ತಿಯ ನರಕ ವಿಭಾಗದಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿದೆ. ಅವರಿಗೆ ಪೌಷ್ಟಿಕ ಆಹಾರ ನೀಡುತ್ತಿಲ್ಲ. ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಿಲ್ಲ. ಇದರಿಂದ ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆಯರಾದ ರಕ್ಷಿತಾ ಸಿಂಗ್ ಹಾಗೂ ಎಂ.ನಾಗಮಣಿ ಎಂಬುವರು ಇತ್ತೀಚೆಗೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News