ಬಿಲ್ಕಿಸ್ ಬಾನು ಪ್ರಕರಣ: ಗುಜರಾತ್ ಸರಕಾರವನ್ನು ವಜಾಗೊಳಿಸುವಂತೆ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಆಗ್ರಹ

Update: 2024-01-09 13:43 GMT

ಬೆಂಗಳೂರು: “ನ್ಯಾಯಾಂಗ ವ್ಯವಸ್ಥೆಯನ್ನು ಬದಿಗೊತ್ತಿ ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ರಕ್ಷಣೆಗೆ ಮುಂದಾಗಿದ್ದ ಗುಜರಾತ್ ಸರಕಾರರವನ್ನು ವಜಾಗೊಳಿಸಬೇಕು ಹಾಗೂ ಗುಜರಾತ್ ಸರಕಾರರದ ಜತೆ ಕೈಜೋಡಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು. ಈ ಪ್ರಕರಣದಲ್ಲಿ ಮೌನವಹಿಸಿರುವ ಪ್ರಧಾನಮಂತ್ರಿಗಳು ಜನರ ಕ್ಷಮೆ ಕೇಳಬೇಕು” ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಅವರು ಆಗ್ರಹಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು “ಕೋಮು ಗಲಭೆ ಸಂದರ್ಭದಲ್ಲಿ 5 ತಿಂಗಳ ಗರ್ಭಿಣಿಯಾಗಿದ್ದಾಗ ಬಿಲ್ಕಿಸ್ ಬಾನು ಅವರ ಮೇಲೆ ಈ 11 ಅಪರಾಧಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದು, 2 ತಿಂಗಳ ಮಗು ಸೇರಿದಂತೆ ಆಕೆಯ ಕುಟುಂಬದ 7 ಜನರನ್ನು ಹತ್ಯೆ ಮಾಡಿದ್ದರು.

ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಮುಂಬೈ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. 2008ರಲ್ಲಿ ಈ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಲಾಗಿತ್ತು. ಇವರನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಬೇಕು ಎಂದು ರಾಧೆ ಶಾಮ್ ಭಗವಾನ್ ಶಾ ಎಂಬುವವರು ಕ್ಷಮಾಧಾನ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗೆ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯ ವಜಾಗೊಳಿಸಿತ್ತು.

ಗುಜರಾತ್ ಸರಕಾರರದ ಈ ನಡೆಯನ್ನು ಸುಪ್ರೀಂ ಕೋರ್ಟ್ ಟೀಕಿಸಿ, ಬಿಡುಗಡೆಯಾಗಿದ್ದ ಅಪರಾಧಿಗಳ ಬಂಧನಕ್ಕೆ ಆದೇಶ ನೀಡಿದೆ. ಆ ಮೂಲಕ ಗುಜರಾತ್ ಬಿಜೆಪಿ ಸರಕಾರರಕ್ಕೆ ಕಪಾಳಮೋಕ್ಷ ಮಾಡಿದೆ. ಪ್ರಧಾನಮಂತ್ರಿಗಳು ಹಾಗೂ ದೇಶದ ಗೃಹ ಸಚಿವರು ಗುಜರಾತಿನವರೇ ಆಗಿದ್ದು ಇವರ ಅಣತಿ ಇಲ್ಲದೆ ಗುಜರಾತ್ ರಾಜ್ಯದಲ್ಲಿ ಯಾವುದೇ ನಿರ್ಧಾರ ಸಾಧ್ಯವಿಲ್ಲ. ಇಂತಹ ಹೀನಕೃತ್ಯ ಮಾಡಿದವರನ್ನು ಬಿಡುಗಡೆ ಮಾಡಿರುವುದನ್ನು ನೋಡಿದರೆ ಕೇಂದ್ರ ಹಾಗೂ ಗುಜರಾತ್ ಸರಕಾರರ ಈ ವಿಚಾರದಲ್ಲಿ ಅಪರಾಧಿಗಳ ಜತೆ ಶಾಮೀಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇಷ್ಟಾದರೂ ಅವರು ಯಾವ ಮುಖ ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾರೆ. ಗುಜರಾತಿನಲ್ಲಿ ನ್ಯಾಯಾಂಗ ವ್ಯವಸ್ಥೆ ನಾಶವಾಗಿದೆ ಎಂದರು.

ಈ ಅಪರಾಧಿಗಳ ರಕ್ಷಣೆಗೆ ಮುಂದಾಗಿರುವ ಗುಜರಾತ್ ಸರಕಾರರವನ್ನು ವಜಾಗೊಳಿಸಲು ಕೇಂದ್ರ ಸರಕಾರರ ಹಾಗೂ ಗುಜರಾತ್ ರಾಜ್ಯಪಾಲರು ಶಿಫಾರಸ್ಸು ಮಾಡಬೇಕು. ಈ ಶಿಫಾರಸ್ಸನ್ನು ರಾಷ್ಟ್ರಪತಿಗಳು ಅನುಮೋದಿಸಿ ಗುಜರಾತ್ ಸರಕಾರರವನ್ನು ವಜಾಗೊಳಿಸಬೇಕು. ಗಾಂಧಿ ಹುಟ್ಟಿದ ಪುಣ್ಯಭೂಮಿಯಲ್ಲಿ ಇಂತಹ ದುರ್ಘಟನೆ ನಡೆದರೆ ಇದರ ಅಪರಾಧಿಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರರಗಳು ರಕ್ಷಣೆ ಮಾಡಿರುವುದು ಖಂಡನೀಯ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News