ವಿಶ್ವವಿದ್ಯಾಲಯಕ್ಕೆ ಗಾಂಧಿ ಹೆಸರು ನಾಮಕರಣ ವಿಧೇಯಕ ಮಂಡನೆ
Update: 2025-03-11 17:43 IST

ಬೆಂಗಳೂರು: ವಿಶ್ವವಿದ್ಯಾಲಯಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಹೆಸರು ನಾಮಕರಣ ಸೇರಿದಂತೆ ಇನ್ನಿತರ ಅಂಶಗಳನ್ನು ಹೊಂದಿರುವ 2025ನೆ ಸಾಲಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ ವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ವೇಳೆಯೇ ಕಾನೂನು ಸಚಿವ ಎಚ್.ಕೆ.ಪಾಟೀಲ್, 2025ನೆ ಸಾಲಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ ವನ್ನು ಮಂಡನೆ ಮಾಡಿದರು.