ಜೈವಿಕ ತಂತ್ರಜ್ಞಾನ ನೀತಿ ಅಳವಡಿಕೆಯಿಂದ ಜೈವಿಕ ತಂತ್ರಜ್ಞಾನ ಕ್ಞೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್ ಖರ್ಗೆ

Update: 2023-07-29 18:39 GMT

ಬೆಂಗಳೂರು: ‘ತಂತ್ರಜ್ಞಾನವಾಗಿ ಅಭಿವೃದ್ಧಿಗೊಂಡಿರುವ ಕೃತಕ ಬುದ್ಧಿಮತ್ತೆ(ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಮೂಲಕ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸುವಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶನಿವಾರ ನಗರದದಲ್ಲಿ ಏಟ್ರಿಯಾ ವಿಶ್ವವಿದ್ಯಾಲಯವು ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಜೈವಿಕ ತಂತ್ರಜ್ಞಾನ ನೀತಿ ಅಳವಡಿಕೆಯಿಂದ ಜೈವಿಕ ತಂತ್ರಜ್ಞಾನ ಕ್ಞೇತ್ರದಲ್ಲಿ ಅಭಿವೃದ್ಧಿಯಾಗಲಿದೆ. ಜೈವಿಕ ಬದಾಲಾವಣೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ಸಾಧ್ಯತೆಗಳ ಬಗ್ಗೆ ಸೆಂಟರ್ ಆಫ್ ಎಕ್ಸಲೆನ್ಸ್ ನೆರವನ್ನೂ ಪಡೆಯಲಾಗುವುದು ಎಂದರು.

ವಿಶ್ವದಲ್ಲಿ ಇಂದಿನ ಪರಿಸರ ಅವನತಿಯನ್ನು ಎದುರಿಸಲು ಶಿಕ್ಷಣ, ಉದ್ಯಮ ಮತ್ತು ಸಂರಕ್ಷಣೆಯ ಮಧ್ಯಸ್ಥಗಾರರನ್ನು ಏಕೀಕೃತವಾಗಿ ಒಳಪಡಿಸುವ ನಿರ್ಣಾಯಕ ಅಗತ್ಯವಿದೆ. ಸುಸ್ಥಿರ ಬೆಳವಣಿಗೆ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ತಂತ್ರಜ್ಞಾನ-ಚಾಲಿತ ಪರಿಹಾರಗಳನ್ನು ರೂಪಿಸುವಲ್ಲಿ ದೇಶದ ಐಟಿ ರಾಜಧಾನಿಯಾದ ಬೆಂಗಳೂರು ಮತ್ತು ಕರ್ನಾಟಕ ಮುಂದಾಳತ್ವ ವಹಿಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು.

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ವಿಜ್ಞಾನಿ ಡಾ.ಕೆ. ಕಸ್ತೂರಿರಂಗನ್ ನೇತೃತ್ವದ ಸಮಿತಿಯು ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ನೀಡಿರುವ ವರದಿಯನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಶಿಫಾರಸುಗಳು ಅನುμÁ್ಠನದ ಕುರಿತು ಸಂಜಯ್ ಕುಮಾರ್ ನೇತೃತ್ವದ ಸಮಿತಿ ಪರಿಶೀಲನೆ ನಡೆಸುತ್ತಿದೆ. ಈ ಸಮಿತಿಯು ಡಿಸೆಂಬರ್ ವೇಳೆಗೆ ತನ್ನ ಅಭಿಪ್ರಾಯಗಳನ್ನು ನೀಡಲಿದೆ ಎಂದರು.

ಕಸ್ತೂರಿರಂಗನ್ ಸಮಿತಿ ನೀಡಿರುವ ವರದಿಗೂ ಮುನ್ನ ನೀಡಿದ್ದ ಮಾಧವ ಗಾಡೀ ನೇತೃತ್ವದ ಸಮಿತಿ ವರದಿಯೂ ಅನುಷ್ಠಾನಕ್ಕೆ ಬಂದಿರಲಿಲ್ಲ. ಈಗ ಪಶ್ಚಿಮ ಘಟ್ಟಗಳಲ್ಲಿ ವಾಸಿಸುವ ಜನರ ಹಿತಾಸಕ್ತಿಯನ್ನು ರಕ್ಷಿಸಿಕೊಂಡೇ ವರದಿಯ ಜಾರಿಗೆ ಸರಕಾರ ಮುಂದಾಗಿದೆ. ಇತರ ಆರು ರಾಜ್ಯಗಳು ಹಾಗೂ ಕೇಂದ್ರ ಸರಕಾರದ ಜತೆ ಸಮಾಲೋಚನೆ ನಡೆಸಿ ವರದಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಶ್ಚಿಮ ಘಟ್ಟಗಳಲ್ಲಿನ ಜೀವವೈವಿಧ್ಯ ಹಾಗೂ ಅಳಿವಿನಂಚಿನಲ್ಲಿರುವ ಪ್ರದೇಶಗಳ ಕುರಿತು ಅರಿವು ಮೂಡಿಸಲು ಶಾಲಾ ಹಂತದಿಂದ ಪದವಿ ಕಾಲೇಜುಗಳವರೆಗೆ ಪಠ್ಯಕ್ರಮದಲ್ಲಿ ಈ ವಿಷಯಗಳನ್ನು ಸೇರಿಸುವ ಅಗತ್ಯವಿದೆ. ವನ್ಯಜೀವಿ ಮತ್ತು ಪರಿಸರ ಕುರಿತು ಗ್ರಾಮ ಪಂಚಾಯಿತಿಗಳ ಹಂತದಿಂದ ಜಾಗೃತಿ ಅಭಿಯಾನಗಳನ್ನು ನಡೆಸಬೇಕಿದೆ.

-ಈಶ್ವರ ಖಂಡ್ರೆ, ಅರಣ್ಯ ಸಚಿವ

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News