ಬಿಟ್ ಕಾಯಿನ್ ಹಗರಣ ಪ್ರಕರಣ : ಡಿವೈಎಸ್ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್‌ಐಟಿ

Update: 2024-10-07 14:41 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಸಂಚಲನ ಸೃಷ್ಟಿಸಿದ್ದ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪದಡಿ ಡಿವೈಎಸ್ಪಿ ಶ್ರೀಧರ್ ಪೂಜಾರಿ ಎಂಬುವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.

ಅ.7ರರಂದು ಡಿವೈಎಸ್ಪಿ ಶ್ರೀಧರ್ ಪೂಜಾರಿರನ್ನು ವಿಚಾರಣೆಗೊಳಪಡಿಸಿದ್ದ ಎಸ್‌ಐಟಿ,  ಬಳಿಕ ಬಂಧಿಸಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ನಗರದ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಶ್ರೀಧರ್ ಪೂಜಾರಿ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಅಲ್ಲದೆ, ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆ ವಿಚಾರಣಾ ನ್ಯಾಯಾಲಯದಿಂದ ಡಿವೈಎಸ್ಪಿ ಶ್ರೀಧರ್ ಪೂಜಾರಿ ಅವರನ್ನು ಘೋಷಿತ ಆರೋಪಿ ಎಂದು ವಾರಂಟ್ ಜಾರಿ ಮಾಡಲಾಗಿತ್ತು.

ವಾರಂಟ್ ಪ್ರಶ್ನಿಸಿ ಇತ್ತೀಚೆಗೆ ಶ್ರೀಧರ್ ಪೂಜಾರಿ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಳಿಕ ಘೋಷಿತ ಆರೋಪಿ ಆದೇಶವನ್ನು ರದ್ದುಪಡಿಸಿತ್ತು. ಇದೀಗ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಡಿವೈಎಸ್ಪಿ ಶ್ರೀಧರ್ ಪೂಜಾರಿ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿರುವುದಾಗಿ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News