ಬಿಟ್ ಕಾಯಿನ್ ಹಗರಣ: ಹಿಂದಿನ ತನಿಖಾಧಿಕಾರಿಗಳ ವಿರುದ್ಧ ಎಫ್‍ಐಆರ್

Update: 2023-08-12 15:38 GMT

ಬೆಂಗಳೂರು, ಆ.12: ಬಿಟ್ ಕಾಯಿನ್ ಹಗರಣದ ತನಿಖೆ ಆರಂಭಿಸಿರುವ ಸಿಐಡಿಯ ವಿಶೇಷ ತನಿಖಾ ತಂಡ (ಎಸ್‍ಐಟಿ) ಪ್ರಕರಣದ ಹಿಂದಿನ ತನಿಖಾಧಿಕಾರಿಗಳ ವಿರುದ್ಧವೇ ಎಫ್‍ಐಆರ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಎಸ್‍ಐಟಿ ತನಿಖಾಧಿಕಾರಿ ಕೆ.ರವಿಶಂಕರ್ ನೀಡಿರುವ ದೂರಿನ ಅನ್ವಯ ಪ್ರಕರಣದ ಹಿಂದಿನ ತನಿಖಾಧಿಕಾರಿಗಳು ಮತ್ತವರ ತಂಡದ ವಿರುದ್ಧ ಕಾಟನ್ ಪೇಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಗೊತ್ತಾಗಿದೆ.

ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ಸಂದರ್ಭದಲ್ಲಿ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‍ಗಳು, ಲ್ಯಾಪ್‍ಟಾಪ್‍ಗಳು, ಕಂಪ್ಯೂಟರ್‍ಗಳು, ಹಾರ್ಡ್ ಡಿಸ್ಕ್, ಪೆನ್ ಡ್ರೈವ್‍ಗಳನ್ನು ವಶಕ್ಕೆ ಪಡೆದ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್) ವಶಕ್ಕೆ ನೀಡಲಾಗಿತ್ತು.

ಈ ದಾಖಲೆಗಳನ್ನು ಎಸ್‍ಐಟಿ ತಂಡ ವಶಕ್ಕೆ ಪಡೆದಿದ್ದು, ಮೂಲ ಫೈಲ್ ಅಲ್ಲದೇ ಹೆಚ್ಚುವರಿ ಫೈಲ್ ಸೃಷ್ಟಿಸಿರುವುದು ಕಂಡು ಬಂದಿದೆ. ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರ ತಂಡದಿಂದಲೇ ಸಾಕ್ಷ್ಯಗಳನ್ನು ತಿರುಚಲಾಗಿದ್ದು, ಸಿಸಿಬಿ ಕಚೇರಿ ಹಾಗೂ ಮತ್ತಿತರ ಕಡೆಗಳಲ್ಲಿ 2020ರ ಸೆಪ್ಟೆಂಬರ್ 9 ರಿಂದ ಡಿಸೆಂಬರ್ 16 ರ ಅವಧಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.

ಸಿಸಿಬಿ ತನಿಖಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಒಳಸಂಚು ರೂಪಿಸಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News