ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ವರುಣಾ ಕ್ಷೇತ್ರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಕೆ ಮಾಡಿದೆ.
ರ್ನಾಟಕ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿರುವ ಬಿಜೆಪಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ನಿರ್ದೇಶಿಸುವಂತೆ ಮನವಿ ಮಾಡಿದೆ.
ಆಮಿಷ ಒಡ್ಡಿದ ಪರಿಣಾಮವಾಗಿ ಸಿದ್ದರಾಮಯ್ಯ ಗೆದ್ದಿದ್ದಾಗಿ ಅವರ ಮಗನೇ ಹೇಳಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನಿರ್ದೇಶಿಸಬೇಕೆಂದು ಬಿಜೆಪಿ ದೂರಿನಲ್ಲಿ ತಿಳಿಸಿದೆ.
ಮತದಾರರಿಗೆ ಆಸೆ, ಆಮಿಷ ಒಡ್ಡಬಾರದೆಂದು ಕಾನೂನಿದೆ. ಆದರೆ, ಬಟ್ಟೆ ತೊಳೆಯುವ ಮತ್ತು ಇಸ್ತ್ರಿ ಹಾಕುವ ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆ ಮತ್ತು ಮನೆ ಮನೆಗೆ ಕುಕ್ಕರ್, ಹಣ ಹಂಚಿದ ಬಗ್ಗೆ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಹೇಳಿಕೆ ನೀಡಿದ್ದರು.
ತಮ್ಮ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಯತೀಂದ್ರ ಸಿದ್ದರಾಮಯ್ಯ, ʼʼನನ್ನ ಹೇಳಿಕೆಯನ್ನ ತಿರುಚಲಾಗಿದೆ. ನಾನು ಆ ಅರ್ಥದಲ್ಲಿ ಹೇಳಿದ್ದಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ.