ಶಿಸ್ತು ಉಲ್ಲಂಘನೆ ಆರೋಪ: 72 ಗಂಟೆ ಒಳಗೆ ಉತ್ತರಿಸುವಂತೆ ಯತ್ನಾಳ್​ ಗೆ ಬಿಜೆಪಿ ಹೈಕಮಾಂಡ್ ನೋಟಿಸ್

Update: 2025-02-10 18:16 IST
ಶಿಸ್ತು ಉಲ್ಲಂಘನೆ ಆರೋಪ: 72 ಗಂಟೆ ಒಳಗೆ ಉತ್ತರಿಸುವಂತೆ ಯತ್ನಾಳ್​ ಗೆ ಬಿಜೆಪಿ ಹೈಕಮಾಂಡ್ ನೋಟಿಸ್

ಬಸನಗೌಡ ಪಾಟೀಲ್ ಯತ್ನಾಳ್‌

  • whatsapp icon

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟ ನಡುವೆ ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್​​ ಅವರಿಗೆ ಬಿಜೆಪಿ ಹೈಕಮಾಂಡ್ ನ ಶಿಸ್ತು ಪಾಲನಾ ಸಮಿತಿಯು ನೋಟಿಸ್ ನೀಡಿದ್ದು, 72 ಗಂಟೆ ಒಳಗೆ ಉತ್ತರಿಸುವಂತೆ ಸೂಚಿಸಿದೆ. ನಿಗದಿತ ಕಾಲಮಿತಿಯೊಳಗೆ ಉತ್ತರ ನೀಡದಿದ್ದಲ್ಲಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಶೋಕಾಸ್ ನೋಟಿಸ್​ನಲ್ಲಿ ಎಚ್ಚರಿಕೆ ನೀಡಲಾಗಿದೆ.

"ಈ ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ಯತ್ನಾಳ್ ಅವರು ಮತ್ತೆ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಇದು ಗಂಭೀರವಾದ ವಿಚಾರವಾಗಿದ್ದು ನೋಟಿಸ್‌ಗೆ ಉತ್ತರ ನೀಡದಿದ್ದರೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ಶಿಸ್ತು ಪಾಲನಾ ಸಮಿತಿ ಎಚ್ಚರಿಕೆ ನೀಡಿದೆ.


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News