ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಎಫ್ ಐಆರ್

Update: 2023-06-28 06:09 GMT

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 17ರಂದು ಆ್ಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ವೀಡಿಯೋ ಹರಿಬಿಟ್ಟ ಹಿನ್ನೆಲೆಯಲ್ಲಿ ಜೂ.19 ರಂದು ಸಚಿವ ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ವಕ್ತಾರ ರಮೇಶ್ ಬಾಬು ದೂರು ಸಲ್ಲಿಕೆ ಮಾಡಿದ್ದರು. ಈ ದೂರಿನ ಅನ್ವಯ ಇದೀಗ ಪೊಲೀಸರು ಅಮಿತ್ ಮಾಳವೀಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News