ಕಾಂಗ್ರೆಸ್ ನಿಂದ ಸ್ಪರ್ಧಿಸುವ ಕುರಿತು ಸಿ.ಪಿ. ಯೋಗೇಶ್ವರ್ ಹೇಳಿದ್ದೇನು?
ಹುಬ್ಬಳ್ಳಿ: ಬೆಂಗಳೂರು: ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ರಾಜಿನಾಮೆ ನೀಡಿದ ಬಳಿಕ ಪ್ರತಿಕ್ರಿಯಿಸಿದ ಯೋಗೇಶ್ವರ್, "ಹಲವು ವರ್ಷಗಳ ಕಾಲ ಬಿಜೆಪಿ ಪಕ್ಷದಲ್ಲಿ ದುಡಿದಿದ್ದೇನೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕೆಂದು ಬಯಸಿದ್ದು, ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವುದು ಖಚಿತ" ಎಂದು ಹೇಳಿದ್ದಾರೆ.
ನಾನು ಸ್ವಇಚ್ಛೆಯಿಂದ ಸಭಾಧ್ಯಕ್ಷರಿಗೆ ರಾಜೀನಾಮೆ ನೀಡಿದ್ದೇನೆ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ಬಂದಿರುವುದರಿಂದ ನಾನು ಈ ತೀರ್ಮಾನ ಮಾಡಿದ್ದೇನೆ. ಪರಿಷತ್ ಸ್ಥಾನ ಇಟ್ಟುಕೊಂಡು ನಾನು ಚುನಾವಣೆಗೆ ಹೋಗಲು ಆಗಲ್ಲ. ನಮ್ಮ ಪಕ್ಷದ ನಾಯಕರು ನನ್ನ ಪರವಾಗಿ ಧ್ವನಿ ಎತ್ತಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ.
ನಾನಿನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ಬಿಜೆಪಿಯಿಂದ ಸ್ಪರ್ಧಿಸುವುದು ನನ್ನ ಮೊದಲ ಆದ್ಯತೆ. ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಬಗ್ಗೆ ಈವರೆಗೆ ನಿರ್ಧರಿಸಿಲ್ಲ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ. ನಾಳೆ ನಮ್ಮ ಕಾರ್ಯಕರ್ತರ ಜೊತೆ ಚರ್ಚಿಸಿ, ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
"ಜೆಡಿಎಸ್ ಕಾರ್ಯಕರ್ತರು ವಿರೋಧ ಮಾಡಿದ್ದು, ಹೀಗಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಕ್ಕೆ ಆಗಲ್ಲ .ಬಿಜೆಪಿಯಿಂದ ನನಗೆ ಕೊಟ್ರೆ ಅನುಕೂಲ ಆಗುತ್ತೆ.ಹಳೇ ಮೈಸೂರು ಭಾಗದಲ್ಲಿ ಪಕ್ಷ ಬೆಳೆಸಬೇಕು ಅನ್ನೋದು ಉದ್ದೇಶ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕೆಂದು ಬಯಸಿದ್ದೇನೆ. ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ" ಎಂದು ಹೇಳಿದರು.