ಪ್ರಿಯಾಂಕ್ ಖರ್ಗೆ ವಿರುದ್ಧ ರಾಜಕೀಯ ಲಾಭ ಪಡೆಯಲು ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

Update: 2023-12-06 14:12 GMT

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದನ್ನೇ ನೆಪವಾಗಿಟ್ಟುಕೊಂಡು ʼಸಚಿವ ಪ್ರಿಯಾಂಕ್‌ ಖರ್ಗೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆʼ ಎಂದು ಕಟ್ಟು ಕಥೆ ಕಟ್ಟಿ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದ ಸಂಗತಿ ಪೊಲೀಸರ ತನಿಖೆಯಿಂದ ಬಯಲಾಗಿದೆ.

ಹಲ್ಲೆ ಪ್ರಕರಣ ಸಂಬಂಧ ಮಣಿಕಂಠ ರಾಠೋಡ್​ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಮಣಿಕಂಠನ ಅಸಲಿಯತ್ತು ಬಯಲಾಗಿದೆ. ಈ ಕಾರು ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಮಣಿಕಂಠ ರಾಠೋಡ್, ನವೆಂಬರ್ 18 ರಂದು ಮಧ್ಯರಾತ್ರಿ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದ. ಅದಲ್ಲದೇ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿ, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ ಮಣಿಕಂಠ ರಾಠೋಡ್ ಅಸಲಯತ್ತು ಬಯಲಾಗಿದೆ. ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆಯತ್ನ ಅಲ್ಲ, ಅಪಘಾತವನ್ನು ಹಲ್ಲೆ ಎಂದು ತನಿಖೆಯಿಂದ ತಿಳಿದುಬಂದಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಸಲು ಹೇಳಿದರು.

ಮಣಿಕಂಠ ರಾಠೋಡ್ ಅವರ ಕಾರು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಪೇಟ್ಲಾ ಗ್ರಾಮದ ಸಮೀಪ ಅಪಘಾತ ಆಗಿತ್ತು. ಅಲ್ಲಿಂದ ಮತ್ತೊಂದು ಕಾರಿನಲ್ಲಿ ಕುಳಿತು ಕಲಬುರಗಿಗೆ ಬರುವಾಗ ಮಾರ್ಗ ಮಧ್ಯದಲ್ಲಿ ತನ್ನ ಮೇಲೆ ನಡೆದಿದೆ ಎಂದು ಬಿಂಬಿಸಿದ್ದಾರೆ. ಇದನ್ನು ಕೆಲ ಪ್ರತ್ಯಕ್ಷದರ್ಶಿ ಸಾಕ್ಷಿಗಳು ತನಿಖೆ ವೇಳೆ ತಿಳಿಸಿದ್ದಾರೆ. ಈ ಸಂಬಂಧ ಕೆಲವು ಸಾಕ್ಷ್ಯಗಳನ್ನು ಕಲೆಹಾಕಲಾಗಿದೆ ಎಂದು ತಿಳಿಸಿದರು.

'ಪ್ರತ್ಯಕ್ಷದರ್ಶಿಗಳನ್ನು ನ್ಯಾಯಾಧೀಶರ ಮುಂದೆ ಹಾಜರಿಪಡಿಸಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ತನಿಖೆಯು ಪ್ರಗತಿಯಲ್ಲಿದೆ' ಎಂದು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News